ರೈತರು, ಸಕ್ಕರೆ ಕಾರ್ಖಾನೆಗಳೆರಡೂ ಉಳಿಯಬೇಕು: ಸಿಎಂ ಡಿ.ಕೆ. ಶಿವಕುಮಾರ್

ಉಡುಪಿ: ರೈತರು ಉಳಿಯಬೇಕು, ಸಕ್ಕರೆ ಕಾರ್ಖಾನೆಗಳೂ ಉಳಿಯಬೇಕು. ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸಲು ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸಲಾಗುತ್ತಿದ್ದು, ರೈತರು ತಾಳ್ಮೆಯಿಂದ ಇರಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು.

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ಕರಾವಳಿ ಪವಿತ್ರ ಭೂಮಿ. ಇಲ್ಲಿ ನಿರಂತರವಾಗಿ ಭೇಟಿ ನೀಡುವುದು ಪ್ರಾರ್ಥನೆ ಸಲ್ಲಿಸಲು, ಜನರ ಸೇವೆ ಮಾಡಲು, ಜನರಿಗೆ ನೀಡಿದ ಮಾತು ಉಳಿಸಿಕೊಳ್ಳಲು ಹಾಗೂ ಅವರ ಸಮಸ್ಯೆಗಳನ್ನು ಪರಿಹರಿಸಲು ಅವಕಾಶ ಕಲ್ಪಿಸುತ್ತದೆ.

ಪ್ರಯತ್ನ ವಿಫಲವಾದರೂ ಪ್ರಾರ್ಥನೆ ಎಂದಿಗೂ ವಿಫಲವಾಗುವುದಿಲ್ಲ. ಮಹಾಲಕ್ಷ್ಮಿ ದೇವಸ್ಥಾನಕ್ಕೆ ಆಹ್ವಾನಿಸಿದ್ದರಿಂದ ಬಂದಿದ್ದೇನೆ’ ಎಂದರು.