ಕುಂದಾಪುರ: ಶ್ರೀ ವೆಂಕಟರಮಣ ಕಾಲೇಜಿನಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಬಾಲಕ-ಬಾಲಕಿ ತಂಡ ಪ್ರಥಮ

ಕುಂದಾಪುರ: ಸ್ಪರ್ಧೆಯಲ್ಲಿ ಸೋಲು-ಗೆಲುವು ಸಾಮಾನ್ಯ. ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿದಾಗ ಬದುಕಿನಲ್ಲಿ ಯಶಸ್ಸು ತಮ್ಮದಾಗಿಸಬಹುದು ಎಂದು ಸರಸ್ವತಿ ವಿದ್ಯಾಲಯ ಗಂಗೊಳ್ಳಿ ಇಲ್ಲಿನ ದೈಹಿಕ ಶಿಕ್ಷಣ ಉಪನ್ಯಾಸಕ ನಾಗರಾಜ್ ಶೆಟ್ಟಿ ಹೇಳಿದರು.

ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ಜಂಟಿ ಆಶ್ರಯದಲ್ಲಿ ಸೆ.22 ರಂದು ಜರುಗಿದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶ್ರೀ ವೆಂಕಟರಮಣ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅಧ್ಯಕ್ಷತೆ ವಹಿಸಿದ್ದರು.

ಕ್ರೀಡಾ ಸಂಯೋಜಕ ರಾಮ ಶೆಟ್ಟಿ ಕುಂದಾಪುರ, ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ರಾಗಿಣಿ, ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪ್ರಮೀಳಾ ಡಿಸೋಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಸ್ಥೆಯ ಆಡಳಿತಾಧಿಕಾರಿ ಪ್ರಭಾಕರ್ ಶ್ಯಾನುಭೋಗ್ ಸ್ವಾಗತಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸವಿತಾ ರಮೇಶ್ ವಂದಿಸಿದರು. ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ನಿರೂಪಿಸಿದರು.

ತ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕ ಬಾಲಕಿಯರ ತಂಡವು ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿ, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಸಂಸ್ಥೆಯ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸುವ ಮೂಲಕ ಸಂಸ್ಥೆಯ ಕನಸನ್ನು ನನಸು ಮಾಡಿದೆ.

ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸುವುದರ ಮೂಲಕ ಹರ್ಷ ವ್ಯಕ್ತ ಪಡಿಸಿದ್ದಾರೆ.