ಉಡುಪಿ: ಸಗ್ರಿ ಶ್ರೀ ವಾಸುಕಿ ಸುಬ್ರಮಣ್ಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ನಾಗಮಂಡಲೋತ್ಸವದ ಪ್ರಯುಕ್ತ ಸುಧರ್ಮ ಸಭೆ ನಡೆಯಿತು.
ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆ ಅವರು ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ಹಿರಿಯ ಧಾರ್ಮಿಕ ಮುಖಂಡ ಕುಡುಪು ಅನಂತಪದ್ಮನಾಭ ದೇವಸ್ಥಾನದ ಆನುವಂಶಿಕ ಅರ್ಚಕ ಮೊಕ್ತೇಸರ ಕುಡುಪು ನರಸಿಂಹ ತಂತ್ರಿ, ಪಾಕತಜ್ಞ ರಮೇಶ ಭಟ್ ಸಗ್ರಿ, ಸಗ್ರಿ ಕ್ಷೇತ್ರದಲ್ಲಿ ಪರಿಚಾರಿಕರಾಗಿ ಕೆಲಸ ಮಾಡುತ್ತಿರುವ ಲಲಿತಾ, ಗಿರಿಜಾ, ಶಾಂತಾ ಹಾಗೂ ವಿದ್ಯುದ್ದೀಪಾಲಂಕಾರ ತಜ್ಞ ಗಣೇಶ್ ಕಡಿಯಾಳಿ ಅವರನ್ನು ಸನ್ಮಾನಿಸಲಾಯಿತು.
ಶ್ರೀ ಕ್ಷೇತ್ರ ಕಟೀಲು ಅನುವಂಶಿಕ ಅರ್ಚಕರಾದ ಹರಿನಾರಾಯಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಉತ್ಸವ ಸಮಿತಿಯ ಅಧ್ಯಕ್ಷರು ಆಗಿರುವ ಶಾಸಕ ರಘುಪತಿ ಭಟ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನುಗಾರಿಕಾ ಫೇಡರೇಶನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ, ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದ ವಿದ್ವಾನ್ ಎ ಹರಿದಾಸ ಭಟ್, ಸಾಮಾಜಿಕ ಮುಖಂಡರಾದ ಎಸ್. ಪ್ರದೀಪ್ ಕುಮಾರ್ ಕಲ್ಕೂರ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಹಾಲಕ್ಷ್ಮೀ ಕ್ಯಾಶ್ಯೂನ ಶ್ರೀಪತಿ ಭಟ್ ಮೂಡಬಿದ್ರೆ, ಉದ್ಯಮಿಗಳಾದ ಮನೋಹರ್ ಶೆಟ್ಟಿ, ಗಣೇಶ್ ಹೆಗ್ಡೆ, ಸಗ್ರಿ ಶ್ರೀ ವಾಸುಕಿ ಸುಬ್ರಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಗೋಪಾಲಕೃಷ್ಣ ಸಾಮಗ, ವಿದ್ವಾನ್ ಗೋಪಾಲ್ ಜೋಯಿಸ್, ಆನಂದತೀರ್ಥ ಉಪಾಧ್ಯಾಯ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಹೆರ್ಗ ಪ್ರಸಾದ ಭಟ್ ಮೊದಲಾದವರು ಉಪಸ್ಥಿತರಿದ್ದರು.