ಬ್ರಹ್ಮಾವರ: ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ

ಉಡುಪಿ: ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ನೀಡಲು 20 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಬ್ರಹ್ಮಾವರ ಮೆಸ್ಕಾಂ ಅಸಿಸ್ಟೆಂಟ್ ಇಂಜಿನಿಯರ್ ಅಶೋಕ್ ಪೂಜಾರಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ದಿನೇಶ್ ಪೂಜಾರಿ ಅವರು ಮನೆಗೆ ವಿದ್ಯುತ್ ಸಂಪರ್ಕ‌ಕ್ಕಾಗಿ ಮೆಸ್ಕಾಂ ಇಂಜಿನಿಯರ್ ಬಳಿ ಹೋಗಿದ್ದರು. ಅದರಂತೆ ಸ್ಥಳ ಪರಿಶೀಲನೆ ನಡೆಸಿದ್ದ ಇಂಜಿನಿಯರ್ ಬಳಿಕ 20 ಸಾವಿರ ರೂ.ಗೆ ಬೇಡಿಕೆ ಇರಿಸಿದ್ದರು. ಈ ಕುರಿತು ದಿನೇಶ್ ಅವರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಅದರಂತೆ ಇಂದು ಬೆಳಿಗ್ಗೆ ಲಂಚದ ಹಣ ಪಡೆಯುತ್ತಿದ್ದಾಗ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಎಸ್ಪಿ ಕುಮಾರಚಂದ್ರ, ಡಿವೈಎಸ್ಪಿ ಮಂಜುನಾಥ ನೇತೃತ್ವದ ತಂಡವು ಮೆಸ್ಕಾಂ ಅಸಿಸ್ಟೆಂಟ್ ಇಂಜಿನಿಯರ್ ಅಶೋಕ್ ಪೂಜಾರಿಯನ್ನು ಬಂಧಿಸಿದೆ.