ಬ್ರಹ್ಮಾವರ: ವಿಜಯಪುರದಲ್ಲಿ ನಡೆದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಎಸ್ಎಂಎಸ್ ಪದವಿ ಪೂರ್ವ ಕಾಲೇಜು, ಬ್ರಹ್ಮಾವರದ ಪ್ರಥಮ ಪಿಯುಸಿ ವಿದ್ಯಾರ್ಥಿ ಶರಣ್ ಅವರು ಚಿನ್ನದ ಪದಕದೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.
ವಿದ್ಯಾರ್ಥಿನಿಯರಾದ ಧನ್ವಿತ, ಮಂದಾರ, ಮತ್ತು ಅನನ್ಯ ಆರ್ ಹೆಗ್ಡೆ ಅವರು ಕಂಚಿನ ಪದಕವನ್ನು ಪಡೆದು ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿರುತ್ತಾರೆ.
ಪ್ರಶಸ್ತಿ ವಿಜೇತರಾದ ವಿದ್ಯಾರ್ಥಿಗಳಿಗೆ, ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕವರ್ಗ, ಮತ್ತು ಶಿಕ್ಷಕರಕ್ಷಕ ಸಮಿತಿ, ಹಳೆ ವಿದ್ಯಾರ್ಥಿ ಸಂಘ ಅಭಿನಂದನೆ ಸಲ್ಲಿಸುತ್ತದೆ.


















