ಉಡುಪಿ: ಅಂಬಲಪಾಡಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ನ ಪ್ರವರ್ತಕ ಡಾ. ಜಿ. ಶಂಕರ್ ಅವರ ಹುಟ್ಟುಹಬ್ಬದ ಅಂಗವಾಗಿ ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಮಣಿಪಾಲ ಕೆಎಂಸಿ ರಕ್ತನಿಧಿ ವಿಭಾಗ ಹಾಗೂ ಕುಂದಾಪುರ ರೆಡ್ ಕ್ರಾಸ್ ಸೊಸೈಟಿಯ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಕೋವಿಡ್ ಲಸಿಕಾ ಮಹಾಮೇಳವು ನಾಳೆ (ಅ.5) ಬೆಳಿಗ್ಗೆ 8.30ರಿಂದ ಬ್ರಹ್ಮಾವರದ ಶ್ಯಾಮಿಲಿ ಶನಾಯದಲ್ಲಿ ನಡೆಯಲಿದೆ.