ಉಡುಪಿ, ಸೆ.09: ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ, ಮೂಲತಃ ಬ್ರಹ್ಮಾವರ ತಾಲೂಕಿನ ಕಾವಡಿ ಗ್ರಾಮದ ಪ್ರಕಾಶ್ ಶೆಟ್ಟಿ (39) ಎಂಬವರು ಕೆಲಸದ ನಿಮಿತ್ತ ಹೊರಜಿಲ್ಲೆಗಳಿಗೆ ತೆರಳುತ್ತಿದ್ದು ಐದಾರು ತಿಂಗಳಿಗೊಮ್ಮೆ ಮನೆಗೆ ಬರುವ ಅಭ್ಯಾಸವಿದ್ದು, ಕಳೆದ ವರ್ಷ ಜೂನ್ ತಿಂಗಳಲ್ಲಿ ಕೊನೆಯ ಬಾರಿಗೆ ಮನೆಗೆ ಬಂದಿದ್ದ ಇವರು ತದನಂತರ ಸುಮಾರು 7 ತಿಂಗಳಿ೦ದೀಚೆಗೆ ಯಾವುದೇ ರೀತಿಯ ಸಂಪರ್ಕಕ್ಕೆ ಸಿಗದೆ, ಮನೆಗೂ ಬಾರದೆ ನಾಪತ್ತೆಯಾಗಿರುತ್ತಾರೆ.
5 ಅಡಿ 5 ಇಂಚು ಎತ್ತರವಿದ್ದು, ಕೋಲು ಮುಖ, ಎಣ್ಣೆಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕ್ನನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೋಟ ಪೊಲೀಸ್ ಠಾಣೆ ದೂ.ಸಂ.0820-2564155, ಮೊಬೈಲ್ ಸಂ: 9480805454 ಅಥವಾ ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂ: 0820-2561966, ಮೊಬೈಲ್ ಸಂ: 9480805432 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೋಟ ಪೊಲೀಸ್ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.















