ಬ್ರಹ್ಮಾವರ: ಫ್ಲ್ಯಾಟ್ ನಲ್ಲಿ ಮಹಿಳೆಯ ಬರ್ಬರ ಹತ್ಯೆ

ಬ್ರಹ್ಮಾವರ: ಫ್ಲ್ಯಾಟ್ ನಲ್ಲಿ ವಾಸವಾಗಿದ್ದ ಮಹಿಳೆಯೊಬ್ಬರನ್ನು ದುಷ್ಕರ್ಮಿಗಳ ತಂಡ  ಕೊಲೆ ಮಾಡಿರುವ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಉಪ್ಪಿನಕೋಟೆ ಎಂಬಲ್ಲಿ ನಡೆದಿದೆ.

ವಿಶಾಲ ಗಾಣಿಗ (35) ಕೊಲೆಯಾದ ಮಹಿಳೆ. ಇವರು ಜು. 11ರಂದು ರಾತ್ರಿಯಿಂದ ಮನೆಯಲ್ಲಿ ಒಬ್ಬರೆ ಇದ್ದರು ಎನ್ನಲಾಗಿದೆ. ಈ ಅವಧಿಯಲ್ಲಿ ದುಷ್ಕಮಿಗಳು ಫ್ಲ್ಯಾಟ್ ಗೆ ಪ್ರವೇಶಿಸಿ ಕೊಲೆಗೈದಿರಬಹುದು ಶಂಕಿಸಲಾಗಿದೆ.

ಕೊಲೆ ಮಾಡಿದ ಬಳಿಕ ದುಷ್ಕಮಿಗಳು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ದೋಚಿದ್ದಾರೆ ಎನ್ನಲಾಗಿದೆ. ಇಂದು ಸಂಜೆ ವೇಳೆಗೆ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಎಸ್ಪಿ ವಿಷ್ಣುವರ್ಧನ್, ಹೆಚ್ಚುವರಿ ಎಸ್ಪಿ ಕುಮಾರ ಚಂದ್ರ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ.