ಬ್ರಹ್ಮಾವರ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ

ಬ್ರಹ್ಮಾವರ: ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದ ಹೊನ್ನಾಳ ಎಂಬಲ್ಲಿ ನಡೆದಿದೆ.

ಹೊನ್ನಾಳ ನಿವಾಸಿ 70 ವರ್ಷದ ಅಕ್ಕಣಿ ಪೂಜಾರ್ತಿ ಆತ್ಮಹತ್ಯೆ ಮಾಡಿಕೊಂಡ ವೃದ್ಧೆ. ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಫೆ. 28ರಂದು ಸಂಜೆ ವೇಳೆ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.