Home Trending ಬ್ರಹ್ಮಾವರ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಬ್ರಹ್ಮಾವರ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಬ್ರಹ್ಮಾವರ: ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮದ ನಿವಾಸಿ ನಾರಾಯಣ ನಾಯಕ್ (45) ಇಂದು ಶವವಾಗಿ ಪತ್ತೆಯಾಗಿದ್ದಾರೆ. ಕುಮ್ರಗೋಡು ಗ್ರಾಮದ ಮಾಬುಕಳ ಸೇತುವೆಯ ರಾಹೆ 66ರ ಎಡಬದಿಯ ಹೊಳೆಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ನಾರಾಯಣ ನಾಯಕ್ ಅವರು ಚಾಂತಾರು ಗ್ರಾಮದ ವಿಲ್ಸಿಲ್ಮಾ ಕಾಂಪೌಂಡ್ ಎಂಬಲ್ಲಿ ಬಾಡಿಗೆ ಮನೆಯಲ್ಲಿ ತನ್ನ ಹೆಂಡತಿ, ಮಕ್ಕಳೊಂದಿಗೆ ವಾಸವಾಗಿದ್ದರು. ಅವರು ಜೂನ್ 14ರ ಮಧ್ಯಾಹ್ನ 3 ಗಂಟೆಯಿಂದ ಮನೆಯಿಂದ ಕಾಣೆಯಾಗಿದ್ದರು. ಇಂದು ಅವರು ಶವವಾಗಿ ಪತ್ತೆಯಾಗಿದ್ದು, ಮಾನಸಿಕ ಖಿನ್ನತೆ ಹಾಗೂ ಕುಡಿತದ ಚಟದಿಂದ ಮನೆಬಿಟ್ಟು ಹೋಗಿ ಮಾಬುಕಳ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.