ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ರಾಜ್ಯ ಮಟ್ಟದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ

ಮಂಗಳೂರು: ಇಲ್ಲಿನ ಉರ್ವ ಕ್ರಿಕೆಟ್ ಮೈದಾನದಲ್ಲಿ ಜರಗಿದ 70 ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಗುರುತಿಸಿ ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘ.ನಿ. ಬ್ರಹ್ಮಾವರ ಸಂಘಕ್ಕೆ ರಾಜ್ಯ ಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ ಲಭಿಸಿದೆ.

ಈಗಾಗಲೇ 2013-14ನೇ ಸಾಲಿನಿಂದ ಸತತವಾಗಿ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ, 2018-19ನೇ ಸಾಲಿನಿಂದ ಸತತವಾಗಿ ಪ್ರತಿಷ್ಠಿತ ರಾಜ್ಯ ಅಪೆಕ್ಸ್ ಬ್ಯಾಂಕಿನ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿಗೆ ಭಾಜನವಾಗಿದೆ.

ಸಂಘದ ಅಧ್ಯಕ್ಷ ಇರ್ಮಾಡಿ ಕೆ. ತಿಮ್ಮಪ್ಪ ಹೆಗ್ಡೆ ಇವರು ಗಣ್ಯರ ಸಮಕ್ಷಮ ಪ್ರಶಸ್ತಿ ಸ್ವೀಕರಿಸಿದರು.

ಸಹಕಾರ ಸಚಿವ ಕೆ.ಎನ್ ರಾಜಣ್ಣ, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ವೇದವ್ಯಾಸ ಕಾಮತ್, ಯಶ್‌ಪಾಲ್ ಸುವರ್ಣ, ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ.ದೇವೇಗೌಡ, ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಹಾಗೂ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್ ,ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ದ.ಕ. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಕೆ.ಎಂ.ಎಫ್ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಮಂಡಳಿ ಸದಸ್ಯರು, ಸಂಘದ ಆಡಳಿತ ಮಂಡಳಿ ನಿರ್ದೇಶಕರಾದ ಸದಾನಂದ ಪೂಜಾರಿ, ರಾಜೇಶ್ ಮರಕಾಲ, ನಾಗವೇಣಿ ಪಂಡರಿನಾಥ, ಪ್ರಕಾಶ್, ಸಂಜೀವ ನಾಯ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್. ಸುಭಾಶ್ಚಂದ್ರ ಶೆಟ್ಟಿ ಹಾಗೂ ಸಂಘದ ಸರ್ವ ಸಿಬ್ಬಂದಿಗಳು ಉಪಸ್ಥಿತರಿದ್ದರು.