ಬ್ರಹ್ಮಾವರ: ಸಿಡಿಲು ಬಡಿದು ಯುವಕ ಮೃತ್ಯು

ಉಡುಪಿ: ಲ್ಯಾಪ್ ಟಾಪ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು‌ ಬಡಿದು‌ ಯುವಕನೊಬ್ಬ ಸಾವನ್ನಪ್ಪಿದ ಘಟನೆ ವಂಡಾರು ಬೋರ್ಡಕಲ್ಲು ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

ವಂಡಾರು ನಿವಾಸಿ‌ ಸಾಫ್ಟ್ ವೇರ್ ಇಂಜಿನಿಯರ್ ಚೇತನ್ (24) ಮೃತಪಟ್ಟ ಯುವಕ. ಚೇತನ್ ಮನೆಯೊಳಗಡೆ ಲ್ಯಾಪ್‌ಟಾಪ್ ನಲ್ಲಿ ಕೆಲಸ ಮಾಡುತ್ತಿದ್ದನು. ಈ ವೇಳೆ ಸಿಡಿಲು ಬಡಿದಿದ್ದು, ಚೇತನ್ ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ.

ತಕ್ಷಣ ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಕೊಂಡದೊಯ್ಯಲಾಗಿದೆ. ಆದರೆ ಅಲ್ಲಿನ ವೈದ್ಯರು ಪರೀಕ್ಷಿಸಿ ಚೇತನ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಚೇತನ್ ಬೆಂಗಳೂರಿನ ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿಯ ಉದ್ಯೋಗಿಯಾಗಿದ್ದರು. ಲಾಕ್ ಡೌನ್ ಬಳಿಕ ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದರು ಎನ್ನಲಾಗಿದೆ.