ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯ ಮೂಲಕ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ (ಕ್ಯಾಟರಿಂಗ್), ಅಂಗಡಿ, ಟೈಲರಿಂಗ್, ಟ್ಯಾಕ್ಸಿ ಹಾಗೂ ಹಸುಸಾಕಾಣಿಕೆಯಂತಹ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ಒದಗಿಸುತ್ತಿದ್ದು ಯೋಜನೆಯ ಅಡಿಯಲ್ಲಿ 18 ರಿಂದ 65 ವರ್ಷದ ಒಳಗಿನ ಅಭ್ಯರ್ಥಿಗಳಿಗೆ ಕನಿಷ್ಠ 1 ಲಕ್ಷ ಹಾಗೂ ಗರಿಷ್ಠ 2 ಲಕ್ಷಗಳ ರೂ.ಗಳ ಸಾಲ-ಸಹಾಯಧನ ನೀಡಲಾಗುವುದು.

ಇದರಲ್ಲಿ ಶೇ.20 ಸಬ್ಸಿಡಿ ಇದ್ದು ಉಳಿಕೆ ಶೇ.80 ಸಾಲದ ಮೊತ್ತಕ್ಕೆ ಶೇ. 4ರಷ್ಟು ಬಡ್ಡಿಯಂತೆ ಒಟ್ಟು 34 ಕಂತುಗಳಲ್ಲಿ ಸಾಲ ಮರು ಪಾವತಿಸಬಹುದಾಗಿದೆ.

ಮಹಿಳೆಯರಿಗೆ ಶೇ. 33 ಹಾಗೂ ವಿಶೇಷಚೇತನರಿಗೆ ಶೇ. 5 ಮೀಸಲಾತಿ ನೀಡಲಾಗುವುದು.

ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದ್ದು ಆಸಕ್ತರು Ksbdb.karnataka.gov.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8762249230 ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.