ಬ್ರಹ್ಮಾವರ: ಕೃಷಿ ಅಭಿಯಾನ ಕಾರ್ಯಕ್ರಮ

ಉಡುಪಿ, ಜೂನ್ 1: ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದಲ್ಲಿ ಬ್ರಹ್ಮಾವರ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮವು ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಎಂಬ ಘೋಷವಾಕ್ಯದಡಿಯಲ್ಲಿ ಜೂನ್ 12 ರಂದು ಬೆಳಗ್ಗೆ 10.30 ಕ್ಕೆ ಕೊಕ್ಕರ್ಣೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಲಿದ್ದು, ಕೊಕ್ಕರ್ಣೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.