ಲಂಡನ್: ನಿರ್ಗಮಿತ ಪ್ರಧಾನಿ ಲಿಜ್ ಟ್ರಸ್ ಅವರಿಂದ ಅಧಿಕಾರ ವಹಿಸಿಕೊಂಡ ನಂತರ, ಬ್ರಿಟನ್‌ನ ಹೊಸ ಪ್ರಧಾನಿ ರಿಷಿ ಸುನಕ್ ಬುಧವಾರ ರಾತ್ರಿ 10 ಡೌನಿಂಗ್ ಸ್ಟ್ರೀಟ್‌ನಲ್ಲಿ ದೀಪಾವಳಿಯ ಆಚರಣೆಗಳಲ್ಲಿ ಪಾಲ್ಗೊಂಡರು. ಎಲ್ಲರಿಗೂ ದೀಪಾವಳಿಯ ಶುಭಾಶಯಗಳನ್ನು ತಿಳಿಸಿದ ಸುನಕ್, “ನಮ್ಮ ಮಕ್ಕಳು ಮತ್ತು ಮೊಮ್ಮಕ್ಕಳು ತಮ್ಮ ದೀಪಗಳನ್ನು ಬೆಳಗಿಸುವ ಮತ್ತು ಭವಿಷ್ಯವನ್ನು ಭರವಸೆಯಿಂದ ನೋಡುವಂತಹ ಬ್ರಿಟನ್ ಅನ್ನು ನಿರ್ಮಿಸಲು ಈ ಕೆಲಸದಲ್ಲಿ ಸಾಧ್ಯವಿರುವ ಎಲ್ಲವನ್ನೂ ನಾನು ಮಾಡುತ್ತೇನೆ” ಎಂದು ವಾಗ್ದಾನ ಮಾಡಿದರು.
ಅವರು ತಮ್ಮ ಅಧಿಕೃತ ನಿವಾಸದಲ್ಲಿ ದೀಪಾವಳಿಯ ಆಚರಣೆಯಲ್ಲಿ ಭಾಗವಹಿಸಿದ ಚಿತ್ರವನ್ನು ಸಹ ಹಂಚಿಕೊಂಡಿದ್ದಾರೆ. ನಂ10 ರಲ್ಲಿಈ ರಾತ್ರಿಯ ದೀಪಾವಳಿಯ ಆಚರಣೆಯಲ್ಲಿ ಪಾಲ್ಗೊಳ್ಳುತ್ತಿರುವುದು ಅದ್ಭುತವಾಗಿದೆ ಎಂದು ಅವರು ಹೇಳಿದ್ದಾರೆ.
ಮಂಗಳವಾರ, ಬಕಿಂಗ್ಹ್ಯಾಮ್ ಅರಮನೆಯಲ್ಲಿ ಕಿಂಗ್ ಚಾರ್ಲ್ಸ್ III ಅವರನ್ನು ಭೇಟಿಯಾದ ನಂತರ ರಿಷಿ ಸುನಕ್ ಹೊಸ ಯುಕೆ ಪ್ರಧಾನ ಮಂತ್ರಿಯಾದರು. ಯುಕೆಯನ್ನು ಮುನ್ನಡೆಸಿದ ಮೊದಲ ಭಾರತೀಯ ಮೂಲದ ವ್ಯಕ್ತಿ, ಯುಕೆ ಪ್ರಧಾನಿಯಾದ ಮೊದಲ ಹಿಂದೂ ಹಾಗೂ ಬಿಳಿಯೇತರ ವ್ಯಕ್ತಿಯಾಗಿ ಸುನಕ್ ಇತಿಹಾಸ ರಚನೆ ಮಾಡಿದರು. ಹೊಸ ರಾಜ ಕಿಂಗ್ ಚಾರ್ಲ್ಸ್ III ಅವರಲ್ಲಿ ಪ್ರತಿಜ್ಞೆ ಸ್ವೀಕರಿಸಿದ ಮೊದಲ ವ್ಯಕ್ತಿ ಸುನಕ್.