ನವದೆಹಲಿ: ವಿಶ್ವದಾದ್ಯಂತ ಇದೀಗ ಬ್ರಿಟನ್ ವೈರಸ್ ನ ಭೀತಿ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಭೂತಾನ್ ದೇಶದಲ್ಲಿ ಅಲ್ಲಿನ ಸರ್ಕಾರ ಏಳು ದಿನಗಳ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ.
ಬ್ರಿಟನ್ ವೈರಸ್ ಅತ್ಯಂತ ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರಕಾರ ರೋಗ ಹರಡುವಿಕೆ ತಡೆಗೆ ಹಾಗೂ ಸಮುದಾಯ ಹರಡುವಿಕೆ ತಪ್ಪಿಸಲು ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.