ರಾಜಸ್ಥಾನ: ಬಸ್ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿ 12 ಜನ ಸಜೀವ ದಹನಗೊಂಡಿರುವ ಭೀಕರ ಘಟನೆ ರಾಜಸ್ಥಾನದ ಬರ್ಮಾರ-ಜೋಧಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬಲರೋಟಾದಿಂದ ಹೊರಟಿದ್ದ ಬಸ್ಗೆ, ಎದುರಾಗಿ ಬಂದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಸುಮಾರು 25 ಜನ ಬಸ್ನಲ್ಲಿ ಪ್ರಯಾಣಿಸುತ್ತಿದ್ದು, ಸದ್ಯದ ಮಾಹಿತಿ ಪ್ರಕಾರ 10 ಮೃತದೇಹಗಳನ್ನ ಹೊರತೆಗೆಯಲಾಗಿದೆ. ಘಟನಾ ಸ್ಥಳಕ್ಕೆ ಪಚೊದ್ರಾ ಜಿಲ್ಲಾಧಿಕಾರಿ, ಮತ್ತು ಶಾಸಕ ಮದನ್ ಪ್ರಜಾಪತ್ ಆಗಮಿಸಿ ಘಟನೆಯ ಮಾಹಿತಿ ಪಡೆದುಕೊಂಡಿದ್ದಾರೆ.












