ದೆಹಲಿಯ ವಿಮಾನ ನಿಲ್ದಾಣದಲ್ಲೇ ಹೊತ್ತಿ ಉರಿದ ಬಸ್

ನವದೆಹಲಿ: ದೆಹಲಿಯ ವಿಮಾನ ನಿಲ್ದಾಣದಲ್ಲೇ ಬಸ್ ಹೊತ್ತಿ ಉರಿದಿದೆ. ವಿಮಾನದ ಪಕ್ಕದಲ್ಲೇ ಬಸ್ ಹೊತ್ತಿ ಉರಿದಿದ್ದರಿಂದ ಕೆಲ ಕಾಲ ಆತಂಕಕ್ಕೂ ಕಾರಣವಾಗಿತ್ತು.

ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-3ನಲ್ಲಿ ಈ ಘಟನೆ ಸಂಭವಿಸಿದೆ. ಪ್ರಯಾಣಿಕರನ್ನು ಕರೆದೊಯ್ಯುವ ಬಸ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಇಡೀ ಬಸ್ಸಿಗೆ ವ್ಯಾಪಿಸಿದ್ದರಿಂದ ಧಗಧಗಿಸಿ ಹೊತ್ತಿ ಉರಿದಿದೆ.