ಉಡುಪಿ: ಜಿಲ್ಲಾಧಿಕಾರಿಗಳ ಅಧಿಸೂಚನೆಯಂತೆ ಸಂತೆಕಟ್ಟೆಯಿಂದ ಉಡುಪಿ ಕಡೆಗೆ ತೆರಳುವ ಕೆಲವೊಂದು
ಬಸ್ಸಿನ ಪರವಾನಿಗೆಯಲ್ಲಿ ನಿಟ್ಟೂರು-ರಾ.ಹೆ. 17 ಎಂದು ನಮೂದಿಸಿರುವ ಬಸ್ಸುಗಳು ಅಂಬಾಗಿಲು ರಾ.ಹೆ. 66 ಕರಾವಳಿ ಬೈಪಾಸಿನಿಂದ ಅಂಬಲಪಾಡಿ ಬೈಪಾಸ್-ಬ್ರಹ್ಮಗಿರಿ-ಅಜ್ಜರಕಾಡು-ತಾಲೂಕು ಕಚೇರಿ ಮೂಲಕ ಹಾಗೂ ಉಳಿದ ಸಿಟಿ ಬಸ್ಸುಗಳು ಅಂಬಾಗಿಲು ತಾಂಗದಗಡಿ-ಗುಂಡಿಬೈಲು ಮೂಲಕ ಕಲ್ಸಂಕಕ್ಕೆ ಬಂದು ಬೃಂದಾವನ ಹೋಟೆಲ್ ಬಳಿ ಎಡಕ್ಕೆ ತಿರುಗಿ ಖಾಫಿಯ ಹೋಟೆಲ್ ಬಳಿ ಬಲಕ್ಕೆ ತಿರುಗಿ ಸಿಟಿ ಬಸ್ಸು ನಿಲ್ದಾಣಕ್ಕೆ ಹಾಗೂ ಬಾರ್ಕೂರು-ಬ್ರಹ್ಮಾವರ-ಹೊನ್ನಾಳ-ಹೆಬ್ರಿ-ಪೆರ್ಡೂರು-ಕುಕ್ಕೆಹಳ್ಳಿ ಹಾಗೂ ಇತರೆ ಕಡೆಯಿಂದ
ಬರುವ ಷಟಲ್ ಸರ್ವೀಸ್ ಬಸ್ಸುಗಳು ಅಂಬಾಗಿಲು ಗುಂಡಿಬೈಲು ಮೂಲಕ ಕಲ್ಸಂಕ ಬಂದು ಉಡುಪಿ ಬಸ್ಸು ನಿಲ್ದಾಣ ಪ್ರವೇಶಿಸಬೇಕಾಗಿರುತ್ತದೆ.
ಆದರೆ ಅಂಬಾಗಿಲು-ಕಲ್ಸಂಕ ಮಾರ್ಗದಲ್ಲಿ ಬಸ್ಸುಗಳು ಸಂಚರಿಸದಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿರುವ ಹಿನ್ನೆಲೆ, ಮೇಲೆ ತಿಳಿಸಲಾದ ಎಲ್ಲಾ ಬಸ್ಸುಗಳು ಕಡ್ಡಾಯವಾಗಿ ಅಂಬಾಗಿಲು-ಗುಂಡಿಬೈಲು-ಕಲ್ಸಂಕ ಮಾರ್ಗವಾಗಿ ಉಡುಪಿ ಬಸ್ಸು ನಿಲ್ದಾಣ ತಲುಪುವಂತೆ ಎಲ್ಲಾ ಬಸ್ ಮಾಲೀಕರಿಗೆ ಸೂಚಿಸಲಾಗಿದ್ದು, ತಪ್ಪಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.