ಉಡುಪಿ: ಮಂಗಳೂರು ವಿಭಾಗದ ಮಂಗಳೂರು ಬಸ್ ನಿಲ್ದಾಣದಿಂದ ಪೂನಾಗೆ ಸಾರ್ವಜನಿಕರ ಬೇಡಿಕೆಗನುಗುಣವಾಗಿ ಕೆಎಸ್ ಆರ್ ಟಿಸಿ ನಾನ್ ಎಸಿ ಸ್ಲೀಪರ್ ಕೋಚ್ ಬಸ್ ಸಂಚಾರ ಅಕ್ಟೋಬರ್ 26 ರಿಂದ ಆರಂಭಗೊಂಡಿದೆ.
ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಆರೋಗ್ಯದ ಹಿತದೃಷ್ಟಿಯಿಂದಾಗಿ ನಿಗಮದ ಎಸ್ಒಪಿ ರಲ್ಲಿಯ ನಿರ್ದೇಶನಗಳಂತೆ ನಿಗಮದ ವಾಹನಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗುವುದು.
ಸದರಿ ಸಾರಿಗೆಗೆ ಆನ್ಲೈನ್ ಮುಂಗಡ ಟಿಕೇಟು ಬುಕ್ಕಿಂಗ್ ಸೌಲಭ್ಯ ಕಲ್ಪಿಸಲಾಗಿದ್ದು,
ವೆಬ್ ಸೈಟ್ (www.ksrtc.in) ಅಥವಾ ಹತ್ತಿರದ ರಿಸರ್ವೇಶನ್ ಕೌಂಟರ್ ಸಂಪರ್ಕಿಸುವಂತೆ ಮಂಗಳೂರು ಕರಾರಸಾಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.