ನವೆಂಬರ್ 12 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಬಿಸಿನೆಸ್ ಡೇ ಆಯೋಜನೆ

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಬಿಸಿನೆಸ್ ಡೇ (ವ್ಯವಹಾರದ ದಿನ) ಅನ್ನು ನವೆಂಬರ್ 12 ರಂದು ಬೆಳಿಗ್ಗೆ10 ರಿಂದ ಸಂಜೆ 5 ರ ವರೆಗೆ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಬಿಸಿನೆಸ್ ಡೇ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಶಿಕ್ಷಣವನ್ನು ನೀಡುವುದರ ಮೂಲಕ ಅವರ ಭವ್ಯ ಭವಿಷ್ಯ ಪ್ರಕಾಶಮಾನವಾಗಬೇಕು ಎನ್ನುವ ನಿಟ್ಟಿನಲ್ಲಿ ವ್ಯವಹಾರಕ್ಕೆ ಸಂಬಂಧಿಸಿದ ವಿಷಯಗಳನ್ನು ತರಗತಿಯಲ್ಲಿ ಅಭ್ಯಾಸ ಮಾಡುವುದರೊಂದಿಗೆ ಪ್ರಾಯೋಗಿಕ ಜ್ಞಾನದ ಅರಿವಾಗಬೇಕು ಎನ್ನುವುದು ಸಂಸ್ಥೆಯ ಅಭಿಲಾಷೆ. ಆ ಉದ್ದೇಶದಿಂದ ವಿದ್ಯಾರ್ಥಿಗಳು ತಂಡಗಳನ್ನು ರಚನೆ ಮಾಡಿಕೊಂಡು ತಮ್ಮ ಅಭಿರುಚಿಗೆ ತಕ್ಕಂತೆ ಅಂಗಡಿಗಳನ್ನು ತೆರೆದು, ಸಣ್ಣ ಬಂಡವಾಳವನ್ನು ಹೂಡಿ ಲಾಭ ಪಡೆಯುವ ಬಗೆ, ಭಾವನಾತ್ಮಕ, ಸಾಮಾಜಿಕ ಸಂಬಂಧಗಳ ಮೌಲ್ಯವನ್ನು ಅರ್ಥಮಾಡಿಕೊಳ್ಳುವುದು, ವಿದ್ಯಾರ್ಥಿಗಳ ಸೃಜನಶೀಲತೆಗೆ ಮೆರಗು ದೊರಕಿಸಲು ಸ್ವ ಉದ್ಯೋಗದ ಕುರಿತು ಮಾಹಿತಿ, ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ದುಡಿದರೇ ಯಶಸ್ಸು ಒಲಿಯುತ್ತದೆ ಎನ್ನುವುದನ್ನು ಮನವರಿಕೆ ಮಾಡಿ ಕೊಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಅಂದಾಜು 40 ರಿಂದ 45 ಅಂಗಡಿ ಮತ್ತು ಮಳಿಗೆಗಳನ್ನು ತೆರೆಯಲು ಕಾಲೇಜಿನ ವತಿಯಿಂದ ಅವಕಾಶ ಮಾಡಿಕೊಡಲಾಗಿದೆ.

ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದು, ವ್ಯಾಪಾರ ಮಾಡಿ ಬಂದ ಲಾಭಾಂಶವು ಅವರ ಭವಿಷ್ಯಕ್ಕೆ ದಾರಿದೀಪವಾಗಬೇಕು ಎನ್ನುವ ದೃಷ್ಟಿಯಲ್ಲಿ ಕೈಗಾರಿಕಾ ಸಂಸ್ಥೆಗಳಿಗೆ ಭೇಟಿ ಏರ್ಪಡಿಸಿ ಅವರ ಜ್ಞಾನ ವೃದ್ಧಿಯಾಗುವಂತೆ ನೋಡಿಕೊಳ್ಳಲಾಗುವುದು. ಆ ಮೂಲಕ ಪರಿಶ್ರಮಕ್ಕೆ ತಕ್ಕ ಫಲ ದೊರೆಯುತ್ತದೆ ಎನ್ನುವುದನ್ನು ಮನವರಿಕೆ ಮಾಡಿಕೊಡಲು ಬಿಸಿನೆಸ್ ಡೇ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ತಿಳಿಸಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ. ಕೆ. ಜಯಪ್ರಕಾಶ್ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿಲಿದ್ದಾರೆ.

ಶ್ರೀ ವೆಂಕಟರಮಣ ದೇವ್ ಶೈಕ್ಷಣಿಕ ಹಾಗೂ ಸಾಂಸ್ಕ್ರತಿಕ ಟ್ರಸ್ಟ್ ನ ಅಧ್ಯಕ್ಷಕೆ.ರಾಮಕೃಷ್ಣ ಕಾಮತ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಬಿ.ಪಿ . ವರದರಾಯ ಪೈ,ಕಾರ್ಯದರ್ಶಿ, ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ್ ಇವರು ಭಾಗವಹಿಸಲಿದ್ದಾರೆ.

ಶ್ರೀ ವೆಂಕಟರಮಣ ದೇವ್ ಶೈಕ್ಷಣಿಕ ಹಾಗೂ ಸಾಂಸ್ಕ್ರತಿಕ ಟ್ರಸ್ಟ್ ನ ಕಾರ್ಯದರ್ಶಿ ಕೆ. ರಾಧಕೃಷ್ಣ ಶೆಣೈ, ಪ್ರಾಂಶುಪಾಲೆ ಶ್ರೀಮತಿ ರಾಗಿಣಿ, ಆಡಳಿತಾಧಿಕಾರಿ ಪ್ರಭಾಕರ್ ಶ್ಯಾನುಭೋಗ್ ಹಾಗೂ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಶಿಕ್ಷಕರು ಉಪಸ್ಥಿತರಿರಲಿದ್ದಾರೆ.

ಕುಂದಾಪುರ ತಾಲೂಕಿನ ವಿವಿಧ ಪ್ರೌಢಶಾಲೆ, ಕಾಲೇಜು ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸುತ್ತಿರುವುದರಿಂದ ಸುಮಾರು ಸಾವಿರಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದೆ. ವಿದ್ಯಾರ್ಥಿಗಳ ನವ ನವೀನತೆಯ ಪ್ರಯತ್ನವನ್ನು ಹುರಿದುಂಬಿಸಲು ಅಧಿಕ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾಲೇಜಿನ ಆಡಳಿತ ಮಂಡಳಿ ತಿಳಿಸಿದೆ.