ಉಪಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಬಿಜೆಪಿ ಭರ್ಜರಿ ಮುನ್ನಡೆ; ಹಾನಗಲ್ ನಲ್ಲಿ ಕಾಂಗ್ರೆಸ್ ಅಲ್ಪ ಮುನ್ನಡೆ

ಸಿಂದಗಿ ಹಾಗೂ ಹಾನಗಲ್‌ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಆರಂಭವಾಗಿದೆ. ವಿಜಯಪುರ ನಗರದ ಸೈನಿಕ ಶಾಲೆಯ ‘ಒಡೆಯರ ಹೌಸ್’ನಲ್ಲಿ ಸಿಂದಗಿ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ. ಒಟ್ಟು 22 ಸುತ್ತು ಮತ ಎಣಿಕೆ ನಡೆದಿದೆ. ಹಾವೇರಿ ನಗರದ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಹಾನಗಲ್‌ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ.

ಸಿಂದಗಿ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರಗೆ 7008 ಮತಗಳ ಮುನ್ನಡೆ

ಸಿಂದಗಿ ವಿಧಾನಸಭಾ ಉಪ ಚುನಾವಣೆ ನಾಲ್ಕನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದೆ.

ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗಿಂತ 7008 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಅಭ್ಯರ್ಥಿಗಳು ಪಡೆದ ಮತಗಳ ವಿವರ (ನಾಲ್ಕನೇ ಸುತ್ತು ಸೇರಿ)

*ಅಶೋಕ ಮನಗೂಳಿ (ಕಾಂಗ್ರೆಸ್): 11227

*ರಮೇಶ ಭೂಸನೂರ (ಬಿಜೆಪಿ): 18235

*ನಾಜಿಯಾ ಅಂಗಡಿ (ಜೆಡಿಎಸ್): 576

ಹಾನಗಲ್ ಉಪಚುನಾವಣೆ: ಮೂರನೇ ಸುತ್ತಿನ ಮತ ಎಣಿಕೆ ಮುಕ್ತಾಯ

ಕಾಂಗ್ರೆಸ್ ಎರಡನೇ ಸುತ್ತಿನಲ್ಲಿ 217 ಮತಗಳ ಮುನ್ನಡೆ

ಕಾಂಗ್ರೆಸ್ಸಿನ ಶ್ರೀನಿವಾಸ ಮಾನೆ – 13503

ಬಿಜೆಪಿಯ ಶಿವರಾಜ ಸಜ್ಜನರ – 13286

ಜೆಡಿಎಸ್- 115