ಬೆಂಗಳೂರು: ಸಿ ವೋಟರ್ ನಡೆಸಿರುವ ಆರ್ ಆರ್ ಕ್ಷೇತ್ರ ಹಾಗೂ ಶಿರಾ ಕ್ಷೇತ್ರದ ಉಪಚುನಾವಣೆಯ ಮತಗಟ್ಟೆ ಸಮೀಕ್ಷೆ ಹೊರಬಿದ್ದಿದ್ದು, ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದೆ.
ಆರ್ ಆರ್ ನಗರದಲ್ಲಿ ಮುನಿರತ್ನ ಜಯಭೇರಿ ಸಾಧಿಸಲಿದ್ದು, ಶಿರಾದಲ್ಲಿ ರಾಜೇಶ್ ಗೌಡ ಗೆಲುವು ಸಾಧಿಸಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.
ಕಾಂಗ್ರೆಸ್ ಎರಡು ಕ್ಷೇತ್ರದಲ್ಲಿ ಸೋಲಲಿದ್ದು, ಜೆಡಿಎಸ್ ಮೂರನೇ ಸ್ಥಾನಕ್ಕೆ ಕುಸಿಯಲಿದೆ ಎಂದು ತಿಳಿಸಿದೆ.