ಬೈಂದೂರು: ಸೇತುವೆಯ ಕಬ್ಬಿಣದ ಪೈಪ್‌ಗೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಬೈಂದೂರು: ಸೇತುವೆಯ ಕಬ್ಬಿಣದ ಪೈಪ್‌ಗೆ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರೂರು ಸಂಕದಗುಂಡಿ ಸೇತುವೆ ಬಳಿ ನಡೆದಿದೆ.

ಶಿರೂರು ಅಳ್ವೆಗದ್ದೆಯ ತಿಮ್ಮಪ್ಪ (56) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಸೋಮವಾರ ರಾತ್ರಿ 10ರಿಂದ ಮಂಗಳವಾರ ಬೆಳಿಗ್ಗೆ 7.30ರ ಮಧ್ಯ ಅವಧಿಯಲ್ಲಿ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಇವರು ಶಿರೂರಿನಲ್ಲಿ ರೂಮ್ ಮಾಡಿಕೊಂಡು ವಾಸ ಮಾಡಿಕೊಂಡಿದ್ದು, ವಿಪರೀತ ಮದ್ಯಸೇವನೆ ಚಟ ಬೆಳೆಸಿಕೊಂಡಿದ್ದರು ಎನ್ನಲಾಗಿದೆ. ಇದರಿಂದ ಅನಾರೋಗ್ಯಕ್ಕೂ ತುತ್ತಾಗಿದ್ದು, ಇದರಿಂದಲೇ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಬೈಂದೂರು ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.