ಬೈಂದೂರು: ಎಲ್.ಪಿ.ಜಿ, ಪೆಟ್ರೋಲ್, ಡಿಸೇಲ್ ಸೇರಿದಂತೆ ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆ ಮಾಡುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರಕಾರದ ಜನವಿರೋಧಿ ನೀತಿಯ ವಿರುದ್ಧ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಬೈಂದೂರು ಯುವ ಕಾಂಗ್ರೆಸ್ ವತಿಯಿಂದ ಬೈಂದೂರು ತಹಶೀಲ್ದಾರ್ ಕಚೇರಿ ಎದುರು ಇಂದು ವಿನೂತನ ಮಾದರಿಯಲ್ಲಿ ತಯಾರಿಸಿದ ಗ್ಯಾಸ್ ಸಿಲಿಂಡರ್ ನಲ್ಲಿ ಕಟ್ಟಿಗೆ ಹಾಕಿ ಬೆಂಕಿ ಮಾಡಿ ಚಹಾ ತಯಾರಿಸುವುದರ ಮೂಲಕ ಪ್ರತಿಭಟನೆ ನಡೆಸಲಾಯಿತು.
ನಂತರ ಬೈಂದೂರು ತಹಶೀಲ್ದಾರ್ ಮೂಲಕ ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಮಾಜಿ ಶಾಸಕರಾದ ಗೋಪಾಲ ಪೂಜಾರಿಯವರು ಮಾತನಾಡಿ, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಇಂಧನ ಬೆಲೆ ಹೆಚ್ಚಿಸಿ ಜನರನ್ನು ಲೂಟಿ ಹೊಡೆಯುವ ಕಾರ್ಯದಲ್ಲಿ ತೊಡಗಿದೆ ಎಂದು ದೂರಿದರು.
ಈ ಜನ ವಿರೋಧಿ ಸರಕಾರವನ್ನು ಕಿತ್ತೊಗೆಯುವ ವರೆಗೂ ನಿರಂತರವಾಗಿ ಪ್ರತಿಭಟಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಮಾತನಾಡಿ, ಇಂಧನ ಸಚಿವರ ಉಸ್ತುವಾರಿ ಜಿಲ್ಲೆಯಾದ ನಮ್ಮ ಜಿಲ್ಲೆಯಲ್ಲೇ ನಿರಂತರ ವಿದ್ಯುತ್ ಕಡಿತವಾಗುತ್ತಿದೆ ಹಾಗೂ ಹಿಂದುತ್ವದ ಆಧಾರದಲ್ಲಿ ಅಧಿಕಾರಕ್ಕೆ ಬಂದ ಸಚಿವರು ಅವರದೆ ಸರಕಾರ ಹಿಂದೂ ದೇವಾಲಯ ಕೆಡವಿರುವುದರ ಬಗ್ಗೆ ಚಕಾರವೆತ್ತುತ್ತಿಲ್ಲ ಎಂದು ಟೀಕಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಎಸ್.ರಾಜು ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಸ್.ಮದನ್ ಕುಮಾರ್, ಬೈಂದೂರು ನಗರ ಕಾಂಗ್ರೆಸ್ ಅಧ್ಯಕ್ಷರಾದ ನಾಗರಾಜ ಗಾಣಿಗ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ್ ಪೂಜಾರಿ ಉಪ್ಪುಂದ, ಮಾಜಿ ತಾ. ಪಂ ಸದಸ್ಯೆ ಗ್ರೀಷ್ಮ ಬಿಡೆ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭರತ್ ದೇವಾಡಿಗ, ಬ್ಲಾಕ್ ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ ದೇವಾಡಿಗ ಹಾಗೂ ಅರವಿಂದ ಪೂಜಾರಿ, ಮುಖಂಡರಾದ ಗಣೇಶ್ ಪೂಜಾರಿ ಬೈಂದೂರು, ನರಸಿಂಹ ಹಳಗೇರಿ, ಪ್ರಕಾಶ ಪೂಜಾರಿ, ಸುಂದರ್ ಕೊಠಾರಿ,ಉಮೇಶ್ ದೇವಾಡಿಗ, ಗೋವಿಂದ ಪೂಜಾರಿ ಹೊಸ್ಕೊಟೆ, ಮಣಿಕಂಠ ಬೈಂದೂರು, ಶಬ್ಬೀರ್, ಮಂಜುನಾಥ ತಗ್ಗರ್ಸೆ, ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಮರವಂತೆ, ಉದಯ ಪೂಜಾರಿ, ಪ್ರಕಾಶ್ ಆಚಾರ್ಯ, ಗಿರೀಶ್ ದೇವಾಡಿಗ, ವಿನೋದ ಪಡುಕೋಣೆ, ಸಂತೋಷ ಹೊಸ್ಕೊಟೆ, ರಾಮ ಕೆರ್ಗಾಲ್ ಸೇರಿದಂತೆ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.












