ಬೈಂದೂರು: ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಬೈಂದೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಬೈಂದೂರು ಠಾಣಾ ವ್ಯಾಪ್ತಿಯ ನಾವುಂದ ಗ್ರಾಮದ ಕೋಡಿಯಾಡಿ ಫಾರ್ಮ್ ಹೌಸ್ ಅಂಗಳದಲ್ಲಿ ಒಣಗಿಸಿದ ಅಡಿಕೆಯನ್ನು ಕಳವು ಮಾಡಿಕೊಂಡು ಹೋಗಿದ್ದ ಆರೋಪಿಗಳನ್ನು ಬೈಂದೂರು ಪಿಎಸ್ಐ ಮತ್ತು ತಂಡ ಬಂಧಿಸಿದ್ದು, ಆರೋಪಿಗಳಿಂದ 2,00,000/-ಮೌಲ್ಯದ ಅಡಿಕೆ ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.