ಉಡುಪಿ: ಅಕ್ರಮ ಕೆಂಪು ಕಲ್ಲು ಗಣಿಗಾರಿಕೆಗೆ ಅ.11ರಂದು ದಾಳಿ ನಡೆಸಿದ ಪೊಲೀಸರು ಓರ್ವನನ್ನು ಬಂಧಿಸಿ, ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕಾಲ್ತೋಡು ಗ್ರಾಮದ ಕಪ್ಪಡಿ ಎಂಬಲ್ಲಿರುವ ಸರಕಾರಿ ಜಾಗದಲ್ಲಿ ವಿಜಯ ಶೆಟ್ಟಿ ಎಂಬಾತ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದು, ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಪೊಲೀಸರು, 90,000ರೂ. ಮೌಲ್ಯದ ಯಂತ್ರ, ಟಿಲ್ಲರ್, ಕೆಂಪು ಕಲ್ಲುಗಳನ್ನು ವಶಪಡಿಸಿಕೊಂಡಿದ್ದಾರೆ.




















