ಬೈಂದೂರು: ಬಾವಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಡ್ತರೆ ಗ್ರಾಮದ ಬಿಲ್ಲುಕೇರಿ ಆಲಂದೂರು ಎಂಬಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.
ಯಡ್ತರೆ ಗ್ರಾಮದ ಬಿಲ್ಲುಕೇರಿ ಆಲಂದೂರು ನಿವಾಸಿ ಜ್ಯೋತಿ ಹಣಬರ (37) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಜ್ಯೋತಿ ಕಳೆದ ಮೂರು ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಇದಕ್ಕೆ ಚಿಕಿತ್ಸೆ ಪಡೆದರೂ ಗುಣಮುಖವಾಗದ ಕಾರಣ ಜೀವನದಲ್ಲಿ ಜಿಗುಪ್ಸೆಗೊಂಡು ಗಂಡನ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸಹೋದರ ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.