ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ

ಹೊಸದಿಲ್ಲಿ : ಉಪರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಗೆಲುವು ಸಾಧಿಸಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಮತ್ತು ವಿರೋಧ ಪಕ್ಷದ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ಅವರ ಮಧ್ಯೆ ನೇರ ಸ್ಪರ್ಧೆ ನಡೆದಿತ್ತು.

ಉಪರಾಷ್ಟ್ರಪತಿ ಚುನಾವಣೆಗೆ 14 ಸಂಸದರು ಗೈರು ಹಾಜರಾಗಿದ್ದು 767 ಸಂಸದರು ಮತ ಚಲಾಯಿಸಿದ್ದರು. ರಾಧಾಕೃಷ್ಣನ್ 452 ಮತಗಳನ್ನು ಪಡೆದರೆ, ವಿರೋಧ ಪಕ್ಷದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ 300 ಮತಗಳನ್ನು ಪಡೆದರು. 15 ಮತಗಳನ್ನು ಅಮಾನ್ಯವೆಂದು ಘೋಷಿಸಲಾಯಿತು ಮತ್ತು 13 ಸಂಸದರು ಅಡ್ಡ ಮತದಾನ ಮಾಡಿದ್ದಾರೆ ಎಂದು ವರದಿಯಾಗಿದೆ.