ಕಾರ್ಕಳ: ಕ್ರಿಯೇಟಿವ್‌ ಪಿಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ.ಎ, ಸಿ.ಎಸ್‌.ಇ.ಇ.ಟಿ ಮಾಹಿತಿ ಕಾರ್ಯಗಾರ

ದಿನಾಂಕ : ಕ್ರಿಯೇಟಿವ್‌ ಪಿಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ.ಎ, ಸಿ.ಎಸ್‌.ಇ.ಇ.ಟಿ ಮಾಹಿತಿ ಕಾರ್ಯಗಾರವನ್ನು ಜು.17 ಮತ್ತು19 ರಂದು ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರೊಫೆಸರ್‌ ರಾಜ್‌ ಗಣೇಶ್‌ ಕಾಮತ್‌ ಆಗಮಿಸಿ, ಪ್ರಸ್ತುತ ವಿದ್ಯಮಾನದಲ್ಲಿ ಚಾರ್ಟರ್ಡ್‌ ಅಕೌಂಟ್‌ ಕೋರ್ಸ್‌ ಗಳಿಗೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ವಿಫುಲ ಅವಕಾಶಗಳಿದ್ದು ಕಾಲೇಜಿನಲ್ಲಿ ಒದಗಿಸುವ ಈ ಕೋರ್ಸ್‌ ಗಳನ್ನು ಸದುಪಯೋಗ ಪಡಿಸಿಕೊಂಡು ವಿದ್ಯಾರ್ಥಿಗಳು ಯಶಸ್ಸು ಕಾಣಬೇಕು ಎಂದರು.

ಖ್ಯಾತ ಕಂಪೆನಿ ಸೆಕ್ರೆಟರಿ ಸಂತೋಷ ಪ್ರಭು ವಿದ್ಯಾರ್ಥಿಗಳಿಗೆ ಕಂಪೆನಿ ಸೆಕ್ರೆಟರಿ ಕಾರ್ಯವೈಖರಿ ಹಾಗೂ ಅಗತ್ಯತೆಗಳ ಬಗ್ಗೆ ವಿವರಿಸಿದರು.

ಸಂಸ್ಥೆಯ ಸಂಸ್ಥಾಪಕ ಅಶ್ವತ್ ಎಸ್.ಎಲ್‌ ಹಾಗೂ ಗಣಪತಿ ಭಟ್‌ ಕೆ.ಎಸ್‌ ವಿದ್ಯಾರ್ಥಿಗಳಿಗೆ ಕೋರ್ಸ್‌ ನ ಮಹತ್ವವನ್ನು ತಿಳಿಸಿ ಶುಭ ಹಾರೈಸಿದರು.