ಅಸಂಘಟಿತ ವಲಯದ ಕಾರ್ಮಿಕರ ಗ್ರಾಚ್ಯುಟಿ ಪಾವತಿ ಕಾಯ್ದೆಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ಅಸಂಘಟಿತ ವಲಯದ ಕಾರ್ಮಿಕರು ಪ್ರಯೋಜನಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಗ್ರಾಚ್ಯುಟಿ ಪಾವತಿ ಕಾಯ್ದೆ 2024ನ್ನು ಜಾರಿಗೆ ತರುವ ಕಾರ್ಮಿಕ ಇಲಾಖೆಯ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಕಾಯ್ದೆಯ ಅನುಷ್ಠಾನದಿಂದ ಕಾರ್ಖಾನೆಗಳು, ಅಂಗಡಿಗಳು ಮತ್ತು ಇತರ ವಾಣಿಜ್ಯ ಮತ್ತು ಅಸಂಘಟಿತ ವಲಯಗಳಲ್ಲಿ ಕೆಲಸ ಮಾಡುವವರಿಗೆ ಸಹಾಯವಾಗುತ್ತದೆ. ಸಂಘಟಿತ ವಲಯದಲ್ಲಿನ ಪ್ರಾವಿಡೆಂಟ್ ಫಂಡ್ ಸೌಲಭ್ಯದ ರೀತಿಯಲ್ಲಿ ಅವರು ವಲಯದ ಯಾವುದೇ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ ವರ್ಷಗಳ ಗ್ರಾಚ್ಯುಟಿಯನ್ನು ಪಡೆಯುತ್ತಾರೆ ಎಂದಿದ್ದಾರೆ.