ಉಡುಪಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತ ಪರಿಕಲ್ಪನೆಗೆ ಪೂರಕವಾಗಿ ಮೀನುಗಾರಿಕೆ ಇಲಾಖೆ ವತಿಯಿಂದ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ವಿಶೇಷ ಮುತುವರ್ಜಿಯಿಂದ ಪಂಜರ ಮೀನು ಕೃಷಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪಂಜರ ಮೀನು ಕೃಷಿ ಕಾರ್ಯಾಗಾರವನ್ನು ಸೆಪ್ಟೆಂಬರ್ 8 ರಂದು ಬೆಳಿಗ್ಗೆ 9 ಗಂಟೆಗೆ ಉಡುಪಿ ಪುರಭವನದಲ್ಲಿ ಆಯೋಜಿಸಲಾಗಿದೆ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಈ ಕಾರ್ಯಗಾರವನ್ನು ಮೀನುಗಾರಿಕೆ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದು, ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
ಸಚಿವರು ಕರಾವಳಿ ಜಿಲ್ಲೆಗಳಲ್ಲಿ ಪಂಜರ ಮೀನು ಕೃಷಿಗೆ ವಿಶೇಷ ಒತ್ತು ನೀಡುವ ಮೂಲಕ ರಾಜ್ಯದಾದ್ಯಂದ 10 ಸಾವಿರ ಮಂದಿಗೆ ಸ್ವ ಉದ್ಯೋಗ ನೀಡುವ ಉದ್ದೇಶಹೊಂದಿದ್ದು, ಪೂರಕವಾಗಿ ಉಡುಪಿಯಲ್ಲಿ ಈ ಕಾರ್ಯಗಾರವನ್ನು ಆಯೋಜಿಸಲಾಗಿಸಲಾಗಿದೆ.
ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳು ಪಂಜರ ಮೀನು ಕೃಷಿ ಹಾಗೂ ಈ ಬಗ್ಗೆ ಮೀನುಗಾರಿಕೆ ಇಲಾಖೆಯ ಯೋಜನೆಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಲಿದ್ದು, ಕಾರ್ಯಗಾರದಲ್ಲಿ ಭಾಗವಹಿಸಲಿಚ್ಚಿಸುವವರು ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ದಿವಾಕರ ಖಾರ್ವಿ ಮೊಬೈಲ್ ಸಂಖ್ಯೆ 98443 39919 ಮತ್ತು ಪ್ರಥಮ ದರ್ಜೆ ಸಹಾಯಕ ರವಿ ಕುಮಾರ್ ಮೊಬೈಲ್ ಸಂಖ್ಯೆ 97414 48143 ಮಾಹಿತಿ ಪಡೆಯಬಹುದು. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪಂಜರು ಮೀನು ಕೃಷಿಯ ಮೂಲಕ ಸ್ವ ಉದ್ಯೋಗಿಗಳಾಗುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.