ಉಡುಪಿ: ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಅಕ್ಟೋಬರ್ 1 ರಂದು ರಾಜ್ಯ ಮಟ್ಟದಲ್ಲಿ ಆಚರಿಸುವ ಹಿನ್ನೆಲೆ ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಕ್ರೀಡೆ ಹಾಗೂ ಸಮಾಜ ಸೇವೆಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದ್ದು ಪ್ರಸ್ತಾವನೆಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ 14 ರೊಳಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಕಚೇರಿ, ತಳ ಅಂತಸ್ತು ಕೊಠಡಿ ಸಂಖ್ಯೆ 4&5, ರಜತಾದ್ರಿ ಮಣಿಪಾಲ ದೂ.ಸಂ:0820-2574810 ಅನ್ನು ಸಂಪರ್ಕಿಸುವoತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.















