ಉಡುಪಿ: ಕುಟುಂಬದ ವಾರ್ಷಿಕ ಆದಾಯ 32,000 ರೂ. ಕ್ಕಿಂತ ಕಡಿಮೆ ಇರುವ ವೃದ್ಧರು, ವಿಶೇಷ ಚೇತನರು, ವಿಧವೆಯರು ಹಾಗೂ ಅವಿವಾಹಿತ ಅಥವಾ ವಿಚ್ಚೇಧಿತ ಮಹಿಳೆಯರು ಮಾಸಿಕ ಪಿಂಚಣಿ ಸೌಲಭ್ಯಕ್ಕಾಗಿ ಕೋರಿಕೆ ಸಲ್ಲಿಸಬಹುದಾಗಿದ್ದು, ಕಂದಾಯ ಇಲಾಖೆಯ ವಿನೂತನ ಯೋಜನೆಯಾದ ಹಲೋ ಕಂದಾಯ ಸಚಿವರೇ ಸಹಾಯವಾಣಿ ಸಂಖ್ಯೆ 155245 ಗೆ ಉಚಿತವಾಗಿ ಕರೆ ಮಾಡುವ ಮೂಲಕ ಮನೆ ಬಾಗಿಲಿನಲ್ಲೇ ಪಿಂಚಣಿ ಸೌಲಭ್ಯವನ್ನು ಪಡೆಯಬಹುದು. ಪಿಂಚಣಿ ಪಡೆಯಲು ಆಧಾರ್ ಕಾರ್ಡ್ ನೋಂದಾವಣೆ ಕಡ್ಡಾಯವಾಗಿದೆ.
ಈ ಯೋಜನೆಯಡಿ ಪಿಂಚಣಿ ಕೋರಿಕೆ ಸ್ವೀಕರಿಸಿದ 72 ಗಂಟೆಗಳಲ್ಲಿ ಅರ್ಹರಿಗೆ ಪಿಂಚಣಿ ಮಂಜೂರಾತಿ ಮಾಡಿ ಮನೆ ಬಾಗಿಲಿಗೆ ಪಿಂಚಣಿ ಆದೇಶವನ್ನು ತಲುಪಿಸಲಾಗುವುದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.