ಉಡುಪಿ : ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ ನೀಡುವ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆವತಿಯಿಂದ ಅನುಷ್ಟಾನ ಮಾಡಿದ್ದು, ಈ ಯೋಜನೆಯ ಸರಳೀಕರಣ ಹಾಗೂ ಶಿಷ್ಯವೇತನ ಮಂಜೂರಾತಿಗಾಗಿ 2019-20 ನೇ ಸಾಲಿನಲ್ಲಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ಪರಿಶಿಷ್ಟ ಜಾತಿಯ ಕಾನೂನು ಪದವೀಧರರಾಗಿರಬೇಕು. ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಕಾನೂನು ಪದವಿ ತೇರ್ಗಡೆಯಾಗಿ 2 ವರ್ಷ ಮೀರಿರಬಾರದು. ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಸಂಸ್ಥೆ/ ಯೂನಿವರ್ಸಿಟಿ ಮೂಲಕ 3 ಅಥವಾ 5 ವರ್ಷಗಳ ಕಾನೂನು ಪದವೀಧರ ಪದವಿಯನ್ನು ಪಡೆದಿರಬೇಕು. ಕಾನೂನು ಪದವೀಧರರು 40 ವರ್ಷಗಳ ವಯೋಮಿತಿಯೊಳಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳು 2 ವರ್ಷಗಳ ಕಾಲ ಸತತ ಸರ್ಕಾರಿ ವಕೀಲರಲ್ಲಿ ತರಬೇತಿ ಪಡೆಯಬೇಕಾಗಿರುತ್ತದೆ. ಅಭ್ಯರ್ಥಿಯು ಬಾರ್ ಕೌನ್ಸಿಲ್‍ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿರಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ. ಮೀರಿರಬಾರದು.
ಅರ್ಜಿಯನ್ನು ಇಲಾಖೆ ವೆಬ್ ಸೈಟ್ ಮೂಲಕ ಪಡೆಯಬಹುದಾಗಿದೆ. ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಗಳನ್ನು 15 ದಿನಗಳ ಒಳಗಾಗಿ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇವರನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.