ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು: ನೈಟ್ ಕರ್ಫ್ಯೂ, ಕಠಿಣ ನಿಯಮಗಳು ಮುಂದುವರಿಕೆ.. ಮದುವೆ, ಸಭೆ, ಸಮಾರಂಭಗಳಿಗೆ ಹಳೆ ರೂಲ್ಸ್ ಮುಂದುವರಿಕೆ..!!

ಬೆಂಗಳೂರು: ರಾಜ್ಯದಲ್ಲಿ ವಿಕೇಂಡ್ ಕರ್ಫ್ಯೂ ರದ್ದುಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ‌. ಅಧಿಕೃತ ಆದೇಶ ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದೆ.

ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ‌.

ವೀಕೆಂಡ್ ಕರ್ಫ್ಯೂಗೆ ವ್ಯಾಪಾರಿಗಳು, ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಲು ನಿರ್ಧಾರಿಸಲಾಗಿದೆ.

ನೈಟ್ ಕರ್ಫೂ ಅವಧಿಯಲ್ಲೂ ಬದಲಾವಣೆ ಮಾಡುವ ಸಾಧ್ಯತೆ ಇದ್ದು, ರಾತ್ರಿ 10 ಗಂಟೆಯ ಬದಲಾಗಿ 11 ಗಂಟೆಯಿಂದ ಕರ್ಫ್ಯೂ ಜಾರಿಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಉಳಿದಂತೆ ಕಟ್ಟುನಿಟ್ಟಿನ ನಿಯಮಗಳು ಜಾರಿಯಲ್ಲಿರಲಿದೆ. ಮದುವೆ, ಸಭೆ, ಸಮಾರಂಭಗಳಿಗೆ ಹಳೆ ರೂಲ್ಸ್ ಮುಂದುವರಿಯಲಿದೆ.