ಉಡುಪಿ: ಜಿಲ್ಲೆಯಲ್ಲಿ ರಫ್ತು ಉತ್ತೇಜನ ಕುರಿತು ಡಿ.ಜಿ.ಎಫ್.ಟಿ ಬೆಂಗಳೂರು, ವಿ.ಟಿ.ಪಿ.ಸಿ ಬೆಂಗಳೂರು, ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ಮಣಿಪಾಲ ಹಾಗೂ ಉಡುಪಿಯ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀ ರವರ ಸಹಯೋಗದೊಂದಿಗೆ ಕೆಪಾಸಿಟಿ ಬಿಲ್ಡಿಂಗ್ ಪ್ರೋಗ್ರಾಮ್ ಕಾರ್ಯಾಗಾರವನ್ನು ನಡೆಸಲು ಉದ್ದೇಶಿಸಲಾಗಿದ್ದು, ಸದ್ರಿ ಕಾರ್ಯಾಗಾರದಲ್ಲಿ ಜಿಲ್ಲೆಯಲ್ಲಿ ರಫ್ತು ಅವಕಾಶಗಳು, ಸವಾಲುಗಳು ಹಾಗೂ ರಫ್ತು ಚಟುವಟಿಕೆಯನ್ನು ಪ್ರಾರಂಭಿಸಲು ಇರುವ ನಿಯಮಾವಳಿಗಳು ಹಾಗೂ ಮುಂತಾದ ವಿಷಯಗಳ ಕುರಿತು ಉದ್ದಿಮೆದಾರರಿಗೆ ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಗುವುದು.
ಆಸಕ್ತರು ಜೂನ್ 20 ರ ಒಳಗೆ ಇ-ಮೇಲ್ [email protected] ನಲ್ಲಿ ತಮ್ಮ ವಿವರವನ್ನು ಸಲ್ಲಿಸಿ, ನೋಂದಾಯಿಸಿಕೊಳ್ಳಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಉಡುಪಿ ಮೊ.ನಂ: 9448623952 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.