ಕ್ಯಾಪ್ಟನ್ ಮಿಲ್ಲರ್’ ಟೀಸರ್ ಧನುಷ್ ಜನ್ಮದಿನಕ್ಕೆ ‘ ಗಿಫ್ಟ್

ದಕ್ಷಿಣ ಚಿತ್ರರಂಗದ ಹೆಸರಾಂತ ನಟ ಧನುಷ್  ಜನ್ಮದಿನದ ಸಂಭ್ರಮದಲ್ಲಿದ್ದಾರೆ. 40ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಸೌತ್ ಸಿನಿಮಾ ಇಂಡಸ್ಟ್ರಿಯ ಸೂಪರ್‌ ಸ್ಟಾರ್ಗೆ ಕುಟುಂಬ ಸದಸ್ಯರು, ಆಪ್ತರು, ಸಿನಿಮಾ ಇಂಡಸ್ಟ್ರಿಯ ಸ್ನೇಹಿತರೂ ಸೇರಿದಂತೆ ಕೋಟ್ಯಂತರ ಅಭಿಮಾನಿಗಳು ಶುಭಾಶಯ ತಿಳಿಸುತ್ತಿದ್ದಾರೆ.ಕಾಲಿವುಡ್ ಸೂಪರ್ ಸ್ಟಾರ್ ಧನುಷ್ ಜನ್ಮದಿನ ಹಿನ್ನೆಲೆಯಲ್ಲಿ ಕ್ಯಾಪ್ಟನ್ ಮಿಲ್ಲರ್ ಸಿನಿಮಾದ ಟೀಸರ್ ರಿಲೀಸ್ ಮಾಡಲಾಗಿದೆ.

‘ಕ್ಯಾಪ್ಟನ್ ಮಿಲ್ಲರ್ ಟೀಸರ್’ ಬಿಡುಗಡೆ: ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾವನ್ನು ನಿರ್ದೇಶಕ ಅರುಣ್ ಮಾಥೇಶ್ವರನ್ ನಿರ್ದೇಶಿಸಿದ್ದಾರೆ. ಧನುಷ್ ಮತ್ತು ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವ ರಾಜ್ಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ 1980ರ ಕಾಲದ ಹಿನ್ನೆಲೆಯನ್ನು ಆಧರಿಸಿದೆ. ಸಂಪೂರ್ಣ ಆಯಕ್ಷನ್ ಬೇಸ್ಡ್ ಚಿತ್ರವಾಗಿದೆ. ನಟ ಧನುಷ್ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಅಭಿಮಾನಿಗಳಿಗೆ ‘ಕ್ಯಾಪ್ಟನ್ ಮಿಲ್ಲರ್ ಟೀಸರ್’ ಉಡುಗೊರೆ ನೀಡಿದ್ದಾರೆ. ಮಧ್ಯರಾತ್ರಿ 12 ಗಂಟೆಗೆ ಕ್ಯಾಪ್ಟನ್ ಮಿಲ್ಲರ್ ಟೀಸರ್ ಅನ್ನು ಅನಾವರಣಗೊಳಿಸಲಾಗಿದೆ. ಆಯಕ್ಷನ್ ಅವತಾರದಲ್ಲಿ ಕಾಲಿವುಡ್ ಸ್ಟಾರ್ ಧನುಷ್ ಅಬ್ಬರಿಸಿದ್ದಾರೆ. ಜೂನ್ 30ರಂದು ಧನುಷ್ ತಮ್ಮ ಫಸ್ಟ್ ಲುಕ್ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಲ್ಲಿ ಕುರೂಹಲ ಮೂಡಿಸಿದ್ದರು.ಧನುಷ್ ಅಭಿನಯದ ಕ್ಯಾಪ್ಟನ್ ಮಿಲ್ಲರ್ ಸಿನಿಮಾದ ಟೀಸರ್ ಅನಾವರಣಗೊಳಿಸುವ ಮೂಲಕ ಚಿತ್ರತಂಡ ವಿಶೇಷವಾಗಿ ಶುಭ ಕೋರಿದೆ.

ಧನುಷ್ ಭಾರತದ ಬಹುಬೇಡಿಕೆ ತಾರೆಯರಲ್ಲಿ ಓರ್ವರು. ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ವಿಭಿನ್ನ ಸ್ಟಾರ್‌ಡಮ್ ಹೊಂದಿದ್ದಾರೆ. ಪಾತ್ರ ಯಾವುದೇ ಇರಲಿ ಅದಕ್ಕೆ ಜೀವ ತುಂಬುವ ಸಾಮರ್ಥ್ಯವುಳ್ಳವರು. ವಿಭಿನ್ನ ಕಥೆ, ವಿಚಿತ್ರ ಗೆಟಪ್, ಅಮೋಘ ನಟನೆಯಿಂದ ದೇಶ ಮಾತ್ರವಲ್ಲದೇ ವಿದೇಶಗಳಲ್ಲೂ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ‘ಕ್ಯಾಪ್ಟನ್ ಮಿಲ್ಲರ್’ ನಟನ ಮುಂದಿನ ಬಹುನಿರೀಕ್ಷಿತ ಸಿನಿಮಾ.

ಧನುಷ್ಗೆ ಜೋಡಿಯಾಗಿ ಪ್ರಿಯಾಂಕಾ ಮೋಹನ್ ಕಾಣಿಸಿಕೊಳ್ಳಲಿದ್ದಾರೆ. ಸಂದೀಪ್ ಕಿಶನ್, ನಿವೇದಿತಾ ಸತೀಶ್, ಜಾನ್ ಕೊಕ್ಕೆನ್, ಮೂರ್ ಕೂಡ ಪ್ರಮುಖ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ. ಡಿಸೆಂಬರ್ 15ರಂದು ತಮಿಳು, ತೆಲುಗು ಮತ್ತು ಹಿಂದಿ ಭಾಷೆಯಲ್ಲಿ ವಿಶ್ವಾದ್ಯಂತ ತೆರೆಕಾಣಲಿದೆ. ಜಿ.ವಿ. ಪ್ರಕಾಶ್ ಸಂಗೀತ ಸಂಯೋಜಿಸಿದ್ದರೆ, ಚಿತ್ರದ ಕ್ಯಾಮರಾ ವರ್ಕ್ ಮತ್ತು ಎಡಿಟಿಂಗ್ ಜವಾಬ್ದಾರಿಯನ್ನು ಶ್ರೇಯಸ್ ಕೃಷ್ಣ ಮತ್ತು ನಾಗರೂನ್ ಹೊತ್ತಿದ್ದಾರೆ. ಸತ್ಯಜ್ಯೋತಿ ಫಿಲ್ಮ್ಸ್ ಬ್ಯಾನರ್ ಅಡಿ ‘ಕ್ಯಾಪ್ಟನ್ ಮಿಲ್ಲರ್’ ನಿರ್ಮಾಣಗೊಳ್ಳುತ್ತಿದೆ.
ಹಲವು ವಿಚಾರಗಳಿಂದ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಸಖತ್ ಸದ್ದು ಮಾಡುತ್ತಿದೆ. ತಮಿಳು ಮತ್ತು ಕನ್ನಡ ಸೂಪರ್ಸ್ಟಾರ್ಗಳ ಕಾಂಬೋದಲ್ಲಿ ಮೂಡಿಬರುತ್ತಿರುವುದರಿಂದ ಅಭಿಮಾನಿಗಳಲ್ಲಿ ಸಿನಿಮಾ ಬಗ್ಗೆ ಬೆಟ್ಟದಷ್ಟು ನಿರೀಕ್ಷೆಗಳಿವೆ. ಸದ್ಯ ಟೀಸರ್ ವೀಕ್ಷಿಸಿದ ಪ್ರೇಕ್ಷಕರು ಆಯಕ್ಷನ್ ಸೀನ್ಗಳಿಗೆ ಹುಬ್ಬೇರಿಸಿದ್ದು, ಸಿನಿಮಾ ಬಿಡುಗಡೆಗೆ ಕಾತರರಾಗಿದ್ದಾರೆ. ಇದೇ ಸಾಲಿನ ಡಿಸೆಂಬರ್ 15ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ‘ಕ್ಯಾಪ್ಟನ್ ಮಿಲ್ಲರ್’ ತೆರೆಕಾಣಲಿದೆ