ಮಾಣಿ: ಕಾರು ಮತ್ತು ಆಟೊ ರಿಕ್ಷಾ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಟೊ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ತಿರುವಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಕೊಡಾಜೆ ಪಂತ್ತಡ್ಕ ನಿವಾಸಿ ಅಮ್ಮಿ ಮೃತ ದುರ್ದೈವಿ. ಮಾಣಿಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಕೊಡಾಜೆ ಕಡೆಯಿಂದ ಮಾಣಿ ಕಡೆಗೆ ಹೋಗುತ್ತಿದ್ದ ಆಟೊ ರಿಕ್ಷಾ ನಡುವೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಚಾಲಕ ಅಮ್ಮಿ ಅವರ ಪತ್ನಿಯ ಕಾಲಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಪಘಾತದ ತೀವ್ರತೆಗೆ ಆಟೊ ರಿಕ್ಷಾ ಕಾರಿನ ಮೇಲೆ ಉರುಳಿ ಬಿದ್ದಿದ್ದು, ಎರಡು ವಾಹನಗಳ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.