ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ನಾವುಂದ ಎಂಬಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ನಾವುಂದ ನಿವಾಸಿ ಎನ್.ಸಿ. ಇಸ್ಮಾಯಿಲ್ (55) ಎಂದು ಗುರುತಿಸಲಾಗಿದೆ. ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಶವವನ್ನು ಕುಂದಾಪುರ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ತಂದೆಯ ಶವ ವೀಕ್ಷಿಸಿದ ಪುತ್ರ ಪ್ರಜ್ಞೆ ತಪ್ಪಿ ಬಿದ್ದಿದ್ದು, ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.