ಮಂಗಳೂರು: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಇನ್ನೂ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರು ನಗರದ ಹೊರವಲಯದ ಕುಳಾಯಿಯಲ್ಲಿ ಇಂದು ಮುಂಜಾನೆ ನಡೆದಿದೆ.
ಮೃತಳನ್ನು ಸುಹಾನಾ (26) ಎಂದು ಗುರುತಿಸಲಾಗಿದೆ. ಫಾತಿಮಾ ಶೌರೀನ್, ರಾಹಿಲ್ ಶಮೀಮ್ ಮತ್ತು ರಾಝಿಕ್ ಶಹಾನ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಪರಿಣಾಮದಿಂದಾಗಿ ಕಾರು ನುಜ್ಜುಗುಜ್ಜಾಗಿದೆ. ಈ ಸಂಬಂಧ ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












