ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ.
ಕಲ್ಲಡ್ಕ ನಿವಾಸಿ ಯತಿರಾಜ್ ಮೃತಪಟ್ಟ ಯುವಕ. ಈತ ಕಲ್ಲಡ್ಕದ ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಎನ್ನಲಾಗಿದೆ.
ಯತಿರಾಜ್ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಮಾರ್ಗದಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾರೊಂದು ಢಿಕ್ಕಿ ಹೊಡೆದಿದೆ. ಇದರಿಂದ ಯತಿರಾಜ್ ಗಂಭೀರ ಗಾಯಗೊಂಡಿದ್ದು, ಕೂಡಲೇ ಯತಿರಾಜ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯತಿರಾಜ್ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕಾರು ಹಾಗೂ ಬೈಕ್ ಜಖಂಗೊಂಡಿದ್ದು, ಕಾರು ಚಾಲಕನಿಗೂ ಗಾಯಗಳಾಗಿವೆ.












