ಉಡುಪಿ – ಕಲ್ಯಾಣಪುರದಲ್ಲಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ, ಶೈಕ್ಷಣಿಕ ಸಹಭಾಗಿತ್ವದ, ತ್ರಿಶಾ ಪದವಿಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಮೈ ಲೈಫ್ ವೃತ್ತಿ ಕೌಶಲ್ಯ ಸಂಸ್ಥೆಯ ಸ್ಥಾಪಕರಾದ ಪ್ರವೀಣ್ ಗುಡಿಯವರು “ನಿಮಗೆ ನೀವೇ ಗುರು ” ಎಂಬ ಶೀರ್ಷಿಕೆಯ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.

ವಿದ್ಯಾರ್ಥಿಗಳು ಸ್ಪಷ್ಟವಾದ ಗುರಿಯನ್ನು ಹೊಂದಿರಬೇಕು, ತಮ್ಮ ಕನಸನ್ನು ನನಸಾಗಿಸಲು ನಿರಂತರ ಪ್ರಯತ್ನ ಮಾಡಬೇಕು ಎಂದು ಹತ್ತು ಹಲವು ಉದಾಹರಣೆಗಳ ಮೂಲಕ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ಮಾತುಗಳಾಡಿದರು. ಮುಂಬರುವ ದಿನಗಳಲ್ಲಿ ಅನೇಕ ಸವಾಲುಗಳು ಎದುರಾಗುತ್ತವೆ ಅದನ್ನು ಧೈರ್ಯವಾಗಿ ಎದುರಿಸಲು ಸಿದ್ಧತೆ ಮಾಡಿಕೊಳ್ಳಿ, ಆಮೂಲಕ ಒತ್ತಡವನ್ನು ನಿಭಾಯಿಸಿಕೊಂಡು ಹೋಗುವುದನ್ನು ಕಲಿಯಿರಿ.

ಭವಿಷ್ಯದ ದಿನಗಳು ಪೂರ್ವ ಸಿದ್ಧತೆಯಿಂದ ಕನಸುಗಳು ಸಾಕಾರವಾಗುತ್ತದೆ , ಯಾರ ಮೇಲೂ ಅವಲಂಬಿತರಾಗಿರಬೇಡಿ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು, ತ್ರಿಶಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಹೆಗಡೆ ಅವರು ಪ್ರಾಸ್ತಾವಿಕ ಮಾತನಾಡಿದರು. ಕನ್ನಡ ಉಪನ್ಯಾಸಕ ಆದರ್ಶ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು

















