ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸದಂತೆ ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣ ದಾಖಲು

ಬೆಂಗಳೂರು: ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 10ನೇ ತರಗತಿ ಪರೀಕ್ಷೆ ನಡೆಸಬಾರದು ಎಂದು ಬೆಳಗಾವಿ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆ ಮುಖ್ಯಸ್ಥೆ ರಾಜಶ್ರೀ ನಾಗರಾಜ ಎನ್ನುವವರು ರಾಜ್ಯ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಜೂನ್ 25ರಿಂದ ಜುಲೈ 4ರ ವರೆಗೆ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ಕೋವಿಡ್-19 ಸಂಕಷ್ಟದಲ್ಲಿ ಪರೀಕ್ಷೆಗಳನ್ನು ನಡೆಸುವುದರಿಂದ ಮಕ್ಕಳ ಜೀವಕ್ಕೆ ಅಪಾಯವಿದೆ. ಇದರೊಂದಿಗೆ ಶಿಕ್ಷಕರು, ಮಕ್ಕಳ ಪೋಷಕರಿಗೂ ಸೋಂಕು ಭಯ ಕಾಡುತ್ತದೆ.
ಹೀಗಾಗಿ ಬಾರಿ 10 ತರಗತಿ ಮಕ್ಕಳಿಗೆ ಪರೀಕ್ಷೆ ನಡೆಸದೆ, ಈ ಹಿಂದಿನ ಪರೀಕ್ಷೆಗಳ ಆಧಾರದಲ್ಲಿ ಉತ್ತೀರ್ಣರನ್ನಾಗಿಸಬೇಕೆಂದು ಸರ್ವೋಚ್ಛ ನ್ಯಾಯಾಲದಲ್ಲಿ ಅರ್ಜಿ ಸಲ್ಲಿಸಿದ್ದಾರೆ.