ಪ್ರದೀಪ್ ಪೂಜಾರಿಗೆ ಹಲ್ಲೆಗೈದು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಉಡುಪಿ: ಪ್ರದೀಪ್ ಪೂಜಾರಿ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಧ್ಯಪ್ರದೇಶದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಧ್ಯಪ್ರದೇಶದಿಂದ ಆರೋಪಿಗಳನ್ನು ಉಡುಪಿಗೆ ಕರೆತರಲಾಗುತ್ತಿದ್ದು, ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಅಧಿಕೃತವಾಗಿ ಬಂಧಿಸಿದ ಬಳಿಕ ಆರೋಪಿಗಳ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಹರಿರಾಮ್ ಶಂಕರ್ ತಿಳಿಸಿದ್ದಾರೆ.