ಕಾರ್ಕಳ: ಯುವತಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿ ವಿರುದ್ದ ಪ್ರಕರಣ ದಾಖಲು

ಕಾರ್ಕಳ: ಇಲ್ಲಿನ ಖಾಸಗಿ ಪೈನಾನ್ಸ್ ಒಂದರಲ್ಲಿ ಉದ್ಯೋಗದಲ್ಲಿದ್ದ ಯುವತಿಗೆ ವ್ಯಕ್ತಿಯೊಬ್ಬ ವಿನಾಕಾರಣ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರ ಗುಂಪು ವ್ಯಕ್ತಿಯನ್ನು ಹಿಡಿದು ಝಾಡಿಸಿದ ಘಟನೆ ಬುಧವಾರ ನಡೆದಿದೆ.

ಇರ್ವತ್ತೂರಿನ ಜಗದೀಶ್ ಪೂಜಾರಿ ಎಂಬಾತ ಕಳೆದ ಹಲವು ದಿನಗಳಿಂದ ನಗರದ ಫೈನಾನ್ಸ್ ಒಂದರಲ್ಲಿ ಅಕೌಂಟೆಂಟ್ ಆಗಿದ್ದ ನಂದಳಿಕೆ ಗ್ರಾಮದ ಯುವತಿಯನ್ನು‌ ಹಿಂಬಾಲಿಸಿ ಅಡ್ಡಗಟ್ಟಿ ಮಾತನಾಡಿಸಲು ಯತ್ನಿಸಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.

ಬುಧವಾರ ಸಂಜೆ ಯುವತಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಆರೋಪಿ ಆಕೆಯನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದಾಗ ಸ್ಥಳೀಯರು ಈತನನ್ನು ಹಿಡಿದಿದ್ದು ಆತನ ಛಳಿ ಬಿಡಿಸಿದ್ದಾರೆ.

ಈ ಘಟನೆಯ ಬಳಿಕ ಯುವತಿ ಈತನ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ದೂರು ನೀಡಿದ್ದು, ಆರೋಪಿ‌ ಜಗದೀಶ್ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ.