ಎಬೋಲಾ ವೈರಸ್ ಅಲರ್ಟ್ : ಆಫ್ರಿಕಾ, ಉಗಾಂಡಾ, ಸುಡಾನ್ ದೇಶಗಳಿಗೆ ಸದ್ಯ ಪಯಣ ಬೆಳೆಸಬೇಡಿ ಎಂದ ಕೇಂದ್ರ ಸರ್ಕಾರ

ನವದೆಹಲಿ: ಆಫ್ರಿಕಾದ ಕೆಲವು ದೇಶಗಳಲ್ಲಿ ಮಾರಕ ಎಬೋಲಾ ವೈರಸ್ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನೆಲೆ, ಕೇಂದ್ರ ಆರೋಗ್ಯ ಸಚಿವಾಲಯ ಭಾರತೀಯ ನಾಗರಿಕರಿಗೆ ಕಟ್ಟುನಿಟ್ಟಿನ ಪ್ರಯಾಣ ಮಾರ್ಗಸೂಚಿ ಪ್ರಕಟಿಸಿದೆ. Democratic Republic of the Congo, ಉಗಾಂಡಾ ಹಾಗೂ ಸೌತ್ ಸುಡಾನ್ ದೇಶಗಳಿಗೆ ಅತ್ಯಗತ್ಯವಿಲ್ಲದಿದ್ದರೆ ಪ್ರಯಾಣ ಕೈಗೊಳ್ಳಬಾರದು ಎಂದು ಸೂಚಿಸಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆ World Health Organization ಈ ಪ್ರದೇಶಗಳಲ್ಲಿನ ಎಬೋಲಾ ಪರಿಸ್ಥಿತಿಯನ್ನು ಜಾಗತಿಕ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ಘೋಷಿಸಿದ ಬೆನ್ನಲ್ಲೇ ಭಾರತ ಸರ್ಕಾರ […]

ಪೆಟ್ರೋಲ್, ಡೀಸೆಲ್ ದರ ಮತ್ತೆ ಹೆಚ್ಚಳ : 10 ದಿನಗಳಲ್ಲಿ ಮೂರನೇ ಬಾರಿ ಬೆಲೆ ಏರಿಕೆ!

ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ ಮತ್ತೆ ಏರಿಕೆ ಮಾಡಲಾಗಿದೆ. ಜಾಗತಿಕ ಕಚ್ಚಾ ತೈಲ ದರ ಏರಿಕೆ ಹಾಗೂ ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನ ಪರಿಸ್ಥಿತಿಗಳ ಹಿನ್ನೆಲೆ ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಗಳು ಇಂಧನ ದರಗಳನ್ನು ಮತ್ತೊಮ್ಮೆ ಹೆಚ್ಚಿಸಿವೆ, ಸರಕಾರ ಘೋಷಿಸಿದೆ. ಕೇಂದ್ರ ಸರಕಾರದ ಈ ನಡೆಯ ಕುರಿತು ಆಕ್ರೋಶವೂ ವ್ಯಕ್ತವಾಗಿದೆ. ಹೊಸ ದರಗಳ ಪ್ರಕಾರ, ಪೆಟ್ರೋಲ್ ಪ್ರತಿ ಲೀಟರ್‌ಗೆ 87 ಪೈಸೆ ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ 91 ಪೈಸೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ New Delhiಯಲ್ಲಿ […]

ತಿರುಪತಿ ದರ್ಶನದ ಹೆಸರಿನಲ್ಲಿ ಮಹಿಳೆಗೆ ಪಂಗನಾಮ ಹಾಕಿದ ಸೈಬರ್ ಕಳ್ಳರು: ಹೊಟೇಲ್ ಬುಕ್ಕಿಂಗ್ ಎಂದು ಕಬಳಿಸಿದ್ದು ಬರೋಬ್ಬರಿ ₹4,99,242, ನೀವೂ ಹೀಗೆ ಮೋಸ ಹೋಗಬೇಡಿ

ಮೈಸೂರು: ದೇವರ ದರ್ಶನದ ಕನಸು ಹೊತ್ತು ಹೊರಟಿದ್ದ ಮಹಿಳೆಯೊಬ್ಬರಿಗೆ ಸೈಬರ್ ಖದೀಮರು ಬಲೆ ಬೀಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ತಿರುಪತಿ ಪ್ರವಾಸಕ್ಕೆ ಹೋಟೆಲ್ ಬುಕ್ ಮಾಡಲು ಗೂಗಲ್‌ನಲ್ಲಿ ಹುಡುಕಾಟ ನಡೆಸಿದ 67 ವರ್ಷದ ಮಹಿಳೆ, ನಕಲಿ ಹೋಟೆಲ್ ನಂಬರ್‌ಗೆ ಕರೆ ಮಾಡಿ ಕೊನೆಗೆ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ಈ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೈಸೂರಿನ ಸರಸ್ವತಿಪುರಂ ನಿವಾಸಿಯಾಗಿರುವ ಮಹಿಳೆ ತಿರುಪತಿ ಪ್ರವಾಸದ ನಿಮಿತ್ತ ಕಡಿಮೆ ದರದ ಹೋಟೆಲ್ ಹುಡುಕುತ್ತಿದ್ದರು. […]

ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಭಾರತ, ಪಾಕ್ ನಲ್ಲಿ ನರಮೇಧ, ಹಿಂಸಾಚಾರದ ಕುರಿತು ಕಳವಳ

ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತವು ಪಾಕಿಸ್ತಾನ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಪಾಕಿಸ್ತಾನವು ದಶಕಗಳಿಂದ ನರಮೇಧ, ಗಡಿಯಾಚೆಗಿನ ಹಿಂಸಾಚಾರ ಹಾಗೂ ನಾಗರಿಕರ ಮೇಲಿನ ದಾಳಿಗಳಲ್ಲಿ ತೊಡಗಿದೆ ಎಂದು ಆರೋಪಿಸಿದೆ. ‘ಸಶಸ್ತ್ರ ಸಂಘರ್ಷದಲ್ಲಿ ನಾಗರಿಕರ ರಕ್ಷಣೆ’ ಕುರಿತ ಚರ್ಚೆಯಲ್ಲಿ ಮಾತನಾಡಿದ ಭಾರತದ ಖಾಯಂ ಪ್ರತಿನಿಧಿ ಹರೀಶ್ ಪರ್ವತನೇನಿ, “ದೀರ್ಘಕಾಲದ ನರಮೇಧದ ದಾಖಲೆ ಹೊಂದಿರುವ ಪಾಕಿಸ್ತಾನವು ಭಾರತದ ಆಂತರಿಕ ವಿಚಾರಗಳನ್ನು ಉಲ್ಲೇಖಿಸುವುದು ವಿಪರ್ಯಾಸ” ಎಂದು ತಿರುಗೇಟು ನೀಡಿದ್ದಾರೆ. ಜಮ್ಮು-ಕಾಶ್ಮೀರ ವಿಚಾರವನ್ನು ಪಾಕಿಸ್ತಾನ ಪ್ರತಿನಿಧಿ ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಭಾರತ ಈ […]

ಕಾದು ನೋಡಿ ಪಾತಾಳಕ್ಕೆ ಕುಸಿಯುತ್ತೆ ತೈಲ ಬೆಲೆ, ಜಾಗತಿಕ ಮಾರುಕಟ್ಟೆ ಬಗ್ಗೆ ಡೊನಾಲ್ಡ್ ಟ್ರಂಪ್ ಭವಿಷ್ಯ!

ಅಮೆರಿಕದ ಅಧ್ಯಕ್ಷ Donald Trump ಜಾಗತಿಕ ತೈಲ ಮಾರುಕಟ್ಟೆ ಬಗ್ಗೆ ಮತ್ತೊಮ್ಮೆ ದೊಡ್ಡ ಹೇಳಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಭಾರೀ ಕುಸಿತವಾಗಬಹುದು ಎಂದು ಭವಿಷ್ಯ ನುಡಿದಿದ್ದಾರೆ. ಆದರೆ, ಅವರ ಹಿಂದಿನ ಹೇಳಿಕೆಗಳು ಮತ್ತು ನೀತಿಗಳ ಬದಲಾವಣೆಗಳನ್ನು ಗಮನಿಸಿದರೆ, ಈ ಹೇಳಿಕೆಯನ್ನು ಎಷ್ಟು ನಂಬಬೇಕು ಎಂಬ ಪ್ರಶ್ನೆ ಕೂಡ ಮೂಡಿದೆ. ತೈಲ ಮಾರುಕಟ್ಟೆ ಬಗ್ಗೆ ಟ್ರಂಪ್ ಹೇಳಿದ್ದೇನು? ವಾಷಿಂಗ್ಟನ್‌ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಟ್ರಂಪ್, “ಜಾಗತಿಕ ಮಾರುಕಟ್ಟೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ತೈಲ ಲಭ್ಯವಿದೆ. ಯಾವುದೇ […]