ಅತಿಥಿ ಶಿಕ್ಷಕರ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಉಡುಪಿ, ಕುಂದಾಪುರ, ಬೈಂದೂರು ಮತ್ತು ಹೆಬ್ರಿ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಲಿಕೆಗಾಗಿ ಗೌರವಧನದ ಆಧಾರದ ಮೇಲೆ ಅತಿಥಿ ಶಿಕ್ಷಕರ ನೇಮಕಾತಿಗಾಗಿ ಡಿ.ಎಡ್ ಕೋರ್ಸ್ನಲ್ಲಿ ಇಂಗ್ಲೀಷ್ ಐಚ್ಛಿಕ ಭಾಷಾ ವಿಷಯವನ್ನು ಅಧ್ಯಯನ ಮಾಡಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿ, ಐ.ಟಿ.ಡಿ.ಪಿ ಕಛೇರಿ, ರಜತಾದ್ರಿ, ಮಣಿಪಾಲ, ಉಡುಪಿ […]

ತಕ್ಷಣ ಬೇಕಾಗಿದ್ದಾರೆ.

ಮಂಗಳೂರು – ಮಣಿಪಾಲದ ಪ್ರಸಿದ್ಧ ಪ್ರೊಡಕ್ಷನ್ MNC ಕಂಪೆನಿಗೆ ಐಟಿಐ, ಡಿಪ್ಲೊಮಾ ಆಗಿರುವ ಅಭ್ಯರ್ಥಿಗಳು ಬೇಕಾಗಿದ್ದಾರೆ.

ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್‌ಗಳಲ್ಲಿ ವಿವಿಧ ಹುದ್ದೆ – ಅರ್ಜಿ ಆಹ್ವಾನ

ಉಡುಪಿ: ಆರೋಗ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್‌ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ Udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕು.ಕ ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಾರ್ಕೂರು ನೇಶನಲ್ ಕೈಗಾರಿಕಾ ತರಬೇತಿ ಸಂಸ್ಥೆ ಯಲ್ಲಿ ಶ್ರೀ ಲಕ್ಷಮೀ ಮೋಟಾರ್ಸ್ ಪ್ರೈ. ಲಿ. ಮತ್ತು ಸುಹಾಸ್ ಆಟೋಮೋಟಿವ್ ಪ್ರೈ. ಲಿ. ಇವರಿಂದ ಕ್ಯಾಂಪಸ್ ಇಂಟರ್ವ್ಯೂ.

ಬಾರ್ಕೂರು: ಬಾರ್ಕೂರು ವಿದ್ಯಾಭಿವರ್ಧಿನಿ ಸಂಘದ ಆಡಳಿತಕ್ಕೊಳಪಟ್ಟ ನೇಶನಲ್ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗವನ್ನು ಕೊಡಿಸುವ ಬಗ್ಗೆ ಚಿಂತನೆ ನಡೆಸಿ ಪ್ರತಿ ವರ್ಷ ಹಲವು ಕಂಪನಿಗಳಿಂದ ಕ್ಯಾಂಪಸ್ ಸಂದರ್ಶನ ಮಾಡುತ್ತ ಬರುತ್ತಿದೆ. ಹಾಗೆಯೇ ಜೂ.24 ರಂದು ಸಂಸ್ಥೆಗೆ ಶ್ರೀ ಲಕ್ಷಮೀ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಸುಹಾಸ್ ಆಟೋಮೋಟಿವ್ ಪ್ರೈವೇಟ್ ಲಿಮಿಟೆಡ್ ಇವರಿಂದ ಕ್ಯಾಂಪಸ್ ಇಂಟರ್ವ್ಯೂ ನಡೆಯಿತು. ವಿದ್ಯಾರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಿದರು.