ಮೇ 29 ರಂದು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ 29 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, […]

ಮಂಗಳೂರು ಬಾಲಭವನದಲ್ಲಿ ಸಂಯೋಜಕ ಹಾಗೂ ಕಚೇರಿ ಸಹಾಯಕ ಹುದ್ದೆ ಖಾಲಿ

ಮಂಗಳೂರು: ಜಿಲ್ಲೆಯ ಬಾಲಭವನದ ಚಟುವಟಿಕೆ ಮತ್ತು ಕಾರ್ಯಕ್ರಮ ನಡೆಸಲು ಕಂಪ್ಯೂಟರ್ ಜ್ಞಾನ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಕಾರ್ಯಕ್ರಮ ಸಂಯೋಜಕರು ಹಾಗೂ ಕಚೇರಿ ಸಹಾಯಕರ ಹುದ್ದೆಗೆ ಮಾಸಿಕ ಗೌರವಧನ 10,000 ರೂ.ಗಳ ಆಧಾರದಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಪಿ.ಯು.ಸಿ ಮತ್ತು ಮೇಲ್ಪಟ್ಟ ವಿದ್ಯಾರ್ಹತೆಯೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರುವ ಅರ್ಹ ಅಭ್ಯರ್ಥಿಗಳು ಕಾರ್ಯಕ್ರಮ ಸಂಯೋಜಕರು ಹಾಗೂ ಕಚೇರಿ ಸಹಾಯಕರ ಹುದ್ದೆಗೆ 2023ರ ಜೂನ್ 6ರೊಳಗೆ ಅರ್ಜಿ ಭರ್ತಿ ಮಾಡಿ ನಗರದ ಬಿಜೈ ನಲ್ಲಿರುವ ಮೆಸ್ಕಾಂ ಹತ್ತಿರದ ಜಿಲ್ಲಾ ಸ್ರೀಶಕ್ತಿ ಭವನ 2ನೇ […]

ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ‘ಬ್ರಹ್ಮಕಲಶೋತ್ಸವ’ ಪ್ರಯುಕ್ತ ದೇಗುಲದಲ್ಲಿ ನಡೆದ ಗಣಹೋಮ, ಮಹಾರುದ್ರಯಾಗ

ಉಡುಪಿ: ಕಾರ್ಕಳ ತಾಲೂಕಿನ ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ, ಶ್ರೀ ಭದ್ರಕಾಳಿ ದೇವರಿಗೆ ಮೇ.25 ರ ವರೆಗೆ ಬ್ರಹ್ಮಕಲಶೋತ್ಸವ ನಡೆಯಲ್ಲಿದ್ದು, ಆ ಪ್ರಯುಕ್ತ ದೇಗುಲದಲ್ಲಿ ಮೇ 23ರ ಬೆಳಿಗ್ಗೆ ಗಂಟೆ 8.00ರಿಂದ ಗಣಪತಿ ಹೋಮ, ಶ್ರೀ ಮಹಾರುದ್ರಯಾಗ, ಮಹಾತತ್ವ ಹೋಮ, ತತ್ವ ಕಲಶಾಭಿಷೇಕ, ತತ್ವನ್ಯಾಸ, ಮಹಾಪೂಜೆ, ಸಹಸ್ರ ಬ್ರಹ್ಮಕಲಶದ ಮಂಡಲ ರಚನೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಮಂಟಪ ಸಂಸ್ಕಾರ, ಸಹಸ್ರಕಲಶಾಧಿವಾಸ, ಕಲಶಾಧಿವಾಸ ಹೋಮಗಳು ಹಾಗೂ ಅಷ್ಟಾವಧಾನ ಧಾರ್ಮಿಕ ಕಾರ್ಯಕ್ರಮಗಳು ಭಕ್ತರ ಸಮ್ಮುಖದಲ್ಲಿ […]

ಕಾರ್ಕಳ: ಅಂಗನವಾಡಿ ಸಹಾಯಕಿಯರ ಹುದ್ದೆಗಾಗಿ ಅರ್ಜಿ ಆಹ್ವಾನ

ಉಡುಪಿ: ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಪದವು, ಕುರ್ಸುಕಟ್ಟೆ, ಕಂಬಳಗುಡ್ಡೆ, ಕಾಯಿನಾಲು, ನಂದಳಿಕೆ ಮಾವಿನಕಟ್ಟೆ, ಸಚ್ಚರಿಪೇಟೆ-2, ಮಲೆಬೆಟ್ಟು ಮತ್ತು ಮಲಾಯಿಬೆಟ್ಟು ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಸಹಾಯಕಿಯರ ಹುದ್ದೆಗೆ ಇತರೆ ಮೀಸಲಾತಿ ಹೊಂದಿರುವ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಕಾರ್ಕಳ ದೂ.ಸಂಖ್ಯೆ: 08258-230992 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾರ್ಕಳ ಶಿಶು […]

ವಿವಿಧೆಡೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಾಗಿ ಅರ್ಜಿ ಆಹ್ವಾನ

ಉಡುಪಿ: ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನೆಯ ಗ್ರಾಮ ಪಂಚಾಯತ್, ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಾದ ಶಿವಾನಂದನಗರ (ಸಾಮಾನ್ಯ), ಹೆಜಮಾಡಿ ಬೋರುಗುಡ್ಡೆ (ಸಾಮಾನ್ಯ), ಕಾಜರಗುತ್ತು (ಸಾಮಾನ್ಯ), ಧರ್ಮೆಟ್ಟು (ಸಾಮಾನ್ಯ) ಮತ್ತು ಮಣಿಪುರ ವಿ.ಪಿ (ಸಾಮಾನ್ಯ) ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕನಿಷ್ಠ ಪಿ.ಯು.ಸಿ ತೇರ್ಗಡೆ ಹೊಂದಿರುವ, ಎಸ್.ಎಸ್.ಎಲ್.ಸಿ.ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಅಭ್ಯಾಸ ಮಾಡಿರುವ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಹಾಗೂ ಅದಮಾರು (ಸಾಮಾನ್ಯ), ಶಿವಾನಂದನಗರ (ಸಾಮಾನ್ಯ), […]