‘ರೇಷನ್ ಕಾರ್ಡ್ ತಿದ್ದುಪಡಿ’ ಆರಂಭ

ಬೆಂಗಳೂರು : ರಾಜ್ಯ ಸರ್ಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು, ಇಂದಿನಿಂದ ಪಡಿತರ ಚೀಟಿ ತಿದ್ದುಪಡಿ ಪೋರ್ಟಲ್ ಆರಂಭಿಸಿದೆ.ನೀವು ಆನ್‌ಲೈನ್‌ನಲ್ಲಿ ಪಡಿತರ ಮಾರ್ಪಡಿಸಲು ಬಯಸಿದ್ರೆ, ನೀವು ಗ್ರಾಮ ಪಂಚಾಯಿತಿ ಕಚೇರಿ ಅಥವಾ ಬಯೋ-ಫೋಟೋ ಕೇಂದ್ರಕ್ಕೆ ಭೇಟಿ ನೀಡಬಹುದು. ಅದ್ರಂತೆ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಏನಾದ್ರು ದೋಷಗಳಿದ್ರೆ, ತಿದ್ದುಪಡಿ ಮಾಡಬಹುದು. ಆನ್‌ಲೈನ್‌ನಲ್ಲಿ ಪಡಿತರ ಚೀಟಿ ತಿದ್ದುಪಡಿಗೆ ಅಗತ್ಯವಿರುವ ದಾಖಲೆಗಳು ಇಂತಿವೆ.! * ಹೆಸರು ಬದಲಾವಣೆಯ ಮಾಡುವಂತಿದ್ರೆ, ಅದರ ಅಫಿಡವಿಟ್ * ಎರಡೂ […]

ಅಶಿಸ್ತಿನಿಂದ ವರ್ತಿಸಿ ಸ್ಪೀಕರ್ ಪೀಠಕ್ಕೆ ಅಗೌರವ: ಬಿಜೆಪಿಯ 10 ಶಾಸಕರ ಅಮಾನತು

ಬೆಂಗಳೂರು: ವಿಧಾನಸಭಾ ಕಲಾಪದ ವೇಳೆ ಅಶಿಸ್ತಿನಿಂದ ವರ್ತಿಸಿದ ಕಾರಣ ಯು.ಟಿ.ಖಾದರ್ ಅವರು ೧೦ ಶಾಸಕರ ಅಮಾನತು ಮಾಡಿದ್ದಾರೆ . ಸ್ಪೀಕರ್ ಪೀಠ ಮತ್ತು ಸದನಕ್ಕೆ ಅಗೌರವ ತೋರಿದ ಆರೋಪದ ಮೇಲೆ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಈ ವಿಧಾನಸಭಾ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಲಾಗಿದೆ. ಬಿಜೆಪಿ ಶಾಸಕರಾದ ಉಮಾನಾಥ ಕೋಟ್ಯಾನ್, ಯಶ್ ಪಾಲ್ ಸುವರ್ಣ,ವೇದವ್ಯಾಸ ಕಾಮತ್, ವಿ.ಸುನಿಲ್ ಕುಮಾರ್,ಆರ್.ಅಶೋಕ್, ಆರಗ ಜ್ಞಾನೇಂದ್ರ, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಭರತ್ ಶೆಟ್ಟಿ, ಡಾ. ಅಶ್ವತ್ಥ ನಾರಾಯಣ ಇವರೆಲ್ಲರನ್ನು ಅಮಾನತು […]

ಪಕ್ಷದ ಘನತೆಗೆ ಧಕ್ಕೆ ತರಬೇಡಿ :ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ವಿಪಕ್ಷ ನಾಯಕನ ಸ್ಥಾನ ಮತ್ತಿತರ ಹುದ್ದೆಗೆ ಸಂಬಂಧಿಸಿ ಪಕ್ಷದ ಕೇಂದ್ರ ಸಂಸದೀಯ ಮಂಡಳಿಯು ಸೂಕ್ತ ಸಮಯದಲ್ಲಿ ಸಮರ್ಥ ನಿರ್ಧಾರವನ್ನು ಪ್ರಕಟಿಸಲಿದೆ.ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನೇಮಕ ಕುರಿತು ಪಕ್ಷದ ನಾಯಕರು ಹೇಳಿಕೆಗಳನ್ನು ನೀಡಿ ಪಕ್ಷದ ಘನತೆಗೆ ಧಕ್ಕೆ ತರಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಸೂಚಿಸಿದ್ದಾರೆ. ಪಕ್ಷದ ಆಂತರಿಕ ವಿಷಯಗಳನ್ನು ಮಾಧ್ಯಮಗಳ ಮುಂದೆ ಚರ್ಚಿಸುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಪಕ್ಷದ ನಾಯಕರಿಗೆ ಸೂಚಿಸಿದ್ದಾರೆ. […]

ಅನ್ನಭಾಗ್ಯ ಯೋಜನೆಗೆ ಟೆಂಡರ್ ಮೂಲಕ ಅಕ್ಕಿ ಪಡೆಯಲು ಕ್ರಮ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೇಂದ್ರ ಸರ್ಕಾರಕ್ಕೆ ಸೇರಿದ ಮೂರು ಸಂಸ್ಥೆಗಳಿಂದ ಅಕ್ಕಿ ಪಡೆಯುವುದಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಇದೀಗ ಅಧಿಕಾರದ ಚುಕ್ಕಾಣಿ ಹಿಡಿದಿದ್ದು ಅಕ್ಕಿ ವಿತರಣೆಯಲ್ಲಿ ಬಹಳ ಗೊಂದಲಗಳು ಸೃಷ್ಟಿಯಾಗಿವೆ. ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯಟೆಂಡರ್ ಮೂಲಕ ಅಕ್ಕಿ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಕಾಂಗ್ರೆಸ್​ ನಾಯಕರು ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಉಚಿತ ಎಂದು ಹೇಳಿದ್ದರು. ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್ (ಎನ್​ಸಿಸಿಎಫ್), ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ […]

ಗೃಹ ಲಕ್ಷ್ಮಿ ಯೋಜನೆ ನಾಳೆಯಿಂದ ಅರ್ಜಿ ಸಲ್ಲಿಕೆಗೆ ಅವಕಾಶ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಠಿ ಬೆಂಗಳೂರು : ಈ ಬಾರಿ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳೊಂದಿಗೆ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್​ ಇದೀಗ ತಾನು ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಜಾರಿಗೆ ತರುತ್ತಿದೆ.ಚುನಾವಣೆ ವೇಳೆ ಘೋಷಿಸಿದಂತೆ ಕಾಂಗ್ರೆಸ್‌ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ. ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,000 ರೂ. ನೀಡುವ ಯೋಜನೆ ಇದಾಗಿದ್ದು, ನಾಳೆಯಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದೆ. […]